ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್! – ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅನೇಕರು ಸಂಚಾರಕ್ಕೆ ನಮ್ಮ ಮೆಟ್ರೋವನ್ನೇ ಅವಲಂಭಿಸಿದ್ದಾರೆ. ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್ ಸಿಕ್ಕಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಎರಡನೇ ರೈಲು ಆಗಮಿಸಿದೆ.
ಇದನ್ನೂ ಓದಿ: ಮಧ್ಯಾಹ್ನ ಮಲಗಿ ಸಂಜೆ ಎದ್ದ ಬಾಲಕ! – ಬೆಳಗ್ಗೆ ಆಯ್ತು ಅಂದುಕೊಂಡು ಸ್ಕೂಲ್ಗೆ ಹೊರಟೇಬಿಟ್ಟ!
ಬೆಂಗಳೂರಿನ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಎರಡನೇ ರೈಲು ಆಗಮಿಸಿದೆ. ಅದರ ಬೋಗಿಗಳು ಕೊತ್ತನೂರು ಡಿಪೋಗೆ ತಲುಪಿವೆ. ಇದರಿಂದ ಪಿಂಕ್ ಲೈನ್ ಯೋಜನೆ ಇನ್ನೊಂದು ಮಹತ್ವದ ಹಂತ ತಲುಪಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಈ ಭಾಗದಲ್ಲಿ ಈಗಾಗಲೇ ಪರೀಕ್ಷಾ ಕಾರ್ಯಗಳು ಆರಂಭವಾಗಿವೆ. ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು ಆರು ಸ್ಟೇಷನ್ಗಳು ನಿರ್ಮಾಣವಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆ ಮತ್ತು ರೈಲಿನ ತಾಂತ್ರಿಕ ಗುಣಮಟ್ಟ ಪರಿಶೀಲನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸುತ್ತಿದೆ. ಈ ಮಾರ್ಗವನ್ನು ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದಕ್ಷಿಣ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಉಳಿದ 13.76 ಕಿಲೋಮೀಟರ್ ಅಂಡರ್ಗ್ರೌಂಡ್ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಎಲ್ಲಾ ಕೆಲಸಗಳು ಪೂರ್ಣಗೊಂಡ ಬಳಿಕ ವರ್ಷದ ಅಂತ್ಯಕ್ಕೆ ಸಂಪೂರ್ಣ ಪಿಂಕ್ ಲೈನ್ ಉದ್ಘಾಟಿಸುವ ಉದ್ದೇಶ ಬಿಎಂಆರ್ಸಿಎಲ್ ಹೊಂದಿದೆ. ಶೀಘ್ರದಲ್ಲೇ ಹೊಸ ರೈಲುಗಳ ಜೋಡಣೆ ಬಳಿಕ ಟ್ರ್ಯಾಕ್ ಪರೀಕ್ಷೆ ಆರಂಭವಾಗಲಿದೆ.

ನೋಡಿರಿ

