ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ – ನಟ ದರ್ಶನ್‌ಗೆ ಬಿಗ್‌ ರಿಲೀಫ್‌!

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ – ನಟ ದರ್ಶನ್‌ಗೆ ಬಿಗ್‌ ರಿಲೀಫ್‌!

ನಟ ದರ್ಶನ್‌ ಅವರ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿತ್ತು. ಈ ಪ್ರಕರಣ ಭಾರಿ ಸುದ್ದಿಯಾಗಿತ್ತು. ಈ ಸಂಬಂಧ ಅಮಿತಾ ಜಿಂದಾಲ್‌ ಎಂಬ ಮಹಿಳೆ ನಟ ದರ್ಶನ್‌ ವಿರುದ್ಧ ದೂರು ನೀಡಿದ್ದರು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ಛೂ ಬಿಡಲಾಗಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಬಿಗ್‌ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಶಾಲೆಗಳು ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ!

ಹೌದು, ದರ್ಶನ್​ ಅವರು ಸಾಕಿದ್ದ ಶ್ವಾನಗಳು ಅಮಿತಾ ಜಿಂದಾಲ್ ಎಂಬ ಮಹಿಳೆಗೆ ಕಚ್ಚಿತ್ತು. ಆದರೆ, ಈ ವೇಳೆ ದರ್ಶನ್ ಮನೆಯಲ್ಲಿ ಇರಲಿಲ್ಲ. ಈ ಸಂಬಂಧ ಅಮಿತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಫ್​​ಐಆರ್​ ದಾಖಲು ಮಾಡಿಕೊಂಡಿದ್ದರು. ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡಲಾಗಿದೆ ಎಂದು ಮಹಿಳೆ ದೂರಿದ್ದರು. ದರ್ಶನ್ ಕೂಡ ವಿಚಾರಣೆಗೆ ಹಾಜರಿ ಹಾಕಿದ್ದರು. ಪ್ರಕರಣ ನಡೆಯೋ ಸಂದರ್ಭದಲ್ಲಿ ನಾನು ಇರಲಿಲ್ಲ. ಇನ್ನು ಹೀಗೆ ಆಗದಂತೆ ನೋಡಿಕೊಳ್ಳುವೆ ಎಂದು ದರ್ಶನ್‌ ಹೇಳಿದ್ದರು.

ಇದೀಗ ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿದೆ. ಮಹಿಳೆ ದರ್ಶನ್ ವಿರುದ್ಧ ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಗಳಿಲ್ಲ. ಕೆಲಸದ ವ್ಯಕ್ತಿ ಮಾಡಿರುವ ತಪ್ಪಿಗೆ  ಮಾಲೀಕನನ್ನು ಆರೋಪಿ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ.

Shwetha M