ನಮ್ಮ ಮೆಟ್ರೋಗೆ ಶಾಕ್ ಕೊಟ್ಟ ಪ್ರಯಾಣಿಕರು! – ನಮ್ಮ ಮೆಟ್ರೋ ಬಾಯ್ಕಾಟ್ ಮಾಡಲು ಚಿಂತನೆ

ನಮ್ಮ ಮೆಟ್ರೋ ದರ ಏರಿಕೆಯಾಗ್ತಿದ್ದಂತೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದೆ. ಇದೀಗ ದರ ಏರಿಕೆಯಾದ ಬೆನ್ನಲ್ಲೇ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಇದೀಗ ಮೆಟ್ರೋ ಪ್ರಯಾಣಿಕರು ಮತ್ತೆ ಬಿಎಂಆರ್‌ಸಿಎಲ್ ವಿರುದ್ಧ ಸಮರ ಸಾರಿದ್ದಾರೆ. ಇದೀಗ ನಮ್ಮ ಮೆಟ್ರೋ ಬಾಯ್ಕಾಟ್ ಅಭಿಯಾನ ಶುರುಮಾಡಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮೀ ಬಗ್ಗೆ ಡಿಕೆಶಿ ಹೇಳಿದ್ದೇನು – 2 ತಿಂಗಳ ಹಣ ಯಾವಾಗ ಬರುತ್ತೆ?
ನಮ್ಮ ಮೆಟ್ರೋ ದರ ಪರಿಷ್ಕರಣೆ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಇದೀಗ ಮೆಟ್ರೋ ಬಾಯ್ಕಾಟ್ ಮಾಡಲು ಮೆಟ್ರೋ ಪ್ರಯಾಣಿಕರ ವೇದಿಕೆ ಸಿದ್ದತೆ ನಡೆಸಿದೆ. ದರ ಏರಿಕೆ ಖಂಡಿಸಿ ಒಂದು ದಿನ ಅಥವಾ ಒಂದು ವಾರ ಮೆಟ್ರೋ ಹತ್ತದಿರಲು ಪ್ಲಾನ್ ಮಾಡಲಾಗುತ್ತಿದೆ.
ಟಿಕೆಟ್ ದರ ಕಡಿಮೆ ಮಾಡಲು ಮೆಟ್ರೋ ಪ್ರಯಾಣಿಕರ ವೇದಿಕೆ ಭಾನುವಾರದವರೆಗೆ ಗಡುವು ನೀಡಿದೆ. ಅಷ್ಟರಲ್ಲಿ ಟಿಕೆಟ್ ದರ ಕಡಿಮೆ ಮಾಡಲಿಲ್ಲ ಅಂದರೆ ಮೆಟ್ರೋ ಬಾಯ್ಕಾಟ್ ಮಾಡುವುದಾಗಿ ತಿಳಿಸಲಾಗಿದೆ. ಈ ಕುರಿತಾಗಿ ಬುಧವಾರ ಸುದ್ದಿಗೋಷ್ಠಿ, ಭಾನುವಾರ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಮೆಟ್ರೋ ಬಾಯ್ಕಾಟ್ ದಿನಾಂಕ ಘೋಷಣೆ ಆಗಲಿದೆ.
ಈ ಬಗ್ಗೆ ಮೆಟ್ರೋ ಪ್ರಯಾಣಿಕರ ವೇದಿಕೆಯ ಸದಸ್ಯ ರಾಜೇಶ್ ಭಟ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ನಲ್ಲಿ ಮೆಟ್ರೋ ಪ್ರಯಾಣಿಕರ ಸಮಾವೇಶ ನಡೆಯಲಿದೆ. ಪ್ರತಿದಿನ ಟಿಕೆಟ್ ದರ ಏರಿಕೆ ಖಂಡಿಸಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರ ನಮ್ಮ ಮೆಟ್ರೋ ಏನು ಮಾಡುತ್ತಿಲ್ಲ. ನಾವು ಈಗಾಗಲೇ ಸಾವಿರಾರು ಸಹಿ ಸಂಗ್ರಹ ಅಭಿಯಾನ ಮಾಡಿದ್ದೇವೆ. ಇಂದು ನಾವು ಬಿಎಂಆರ್‌ಸಿಲ್ ಎಂಡಿ ಅವರನ್ನು ಭೇಟಿ ಮಾಡಿ ದರವನ್ನು ಕಡಿಮೆ ಮಾಡಲು ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಬಾಯ್ಕಾಟ್ಗೆ ನಮ್ಮ ಮೆಟ್ರೋ ಪ್ರಯಾಣಿಕರು ಬೆಂಬಲ ಸೂಚಿಸಿದ್ದಾರೆ. ಜನರಿಗೆ ಒಳ್ಳೆಯದು ಆಗುತ್ತದೆ ಅಂದರೆ ನಾವು ಇದಕ್ಕೆ ಸಪೋರ್ಟ್ ಮಾಡುತ್ತೇವೆ. ಇಷ್ಟೊಂದು ದರ ಏರಿಕೆ ಮಾಡಿದ್ದು ಸರಿಯಲ್ಲ. ಇದಕ್ಕೆ ಎಲ್ಲರು ಬೆಂಬಲ ಕೊಡಬೇಕು. ಮೆಟ್ರೋ ಟಿಕೆಟ್ ದರ ಏರಿಕೆ ಆದ ಮೇಲೆ ನಾವು ಈಗಾಗಲೇ ಮೆಟ್ರೋದಲ್ಲಿ ಪ್ರಯಾಣ ಮಾಡುವುದನ್ನು ಬಿಟ್ಟಿದ್ದೀವಿ. ಬಸ್ನಲ್ಲೂ ಹೆಚ್ಚಳ, ಮೆಟ್ರೋ ರೈಲಿನಲ್ಲೂ ಅಂದರೆ ಹೇಗೆ? 70 ರೂ ಕೊಟ್ಟರೆ ದಿನವೆಲ್ಲಾ ಸಂಚಾರ ಮಾಡಬಹುದು. ಮೆಟ್ರೋದಲ್ಲಿ ಪಾಸ್ ದರವು ತುಂಬಾ ಆಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.