ಇಡ್ಲಿ ಪ್ರಿಯರಿಗೆ ಬಿಗ್ ಶಾಕ್!- ಕ್ಯಾನ್ಸರ್ ಬರುತ್ತೆ ಹುಷಾರ್
ಇಡ್ಲಿ ಪ್ಲಾಸ್ಟಿಕ್ನಲ್ಲಿ ವಿಷ!
ರಾಸಾಯನಿಕ, ಕೃತ ಬಣ್ಣಗಳನ್ನು ಬಳಸುವ ಕಾರಣ ಗೋಬಿ ಮಂಚೂರಿ, ಪಾನಿ ಪುರಿ ಹಾಗೂ ಇನ್ನಿತರ ಫಾಸ್ಟ್ ಫುಡ್ ಐಟಂಗಳು ಅವುಗಳನ್ನು ಸೇವಿಸುವವರಲ್ಲಿ ಕ್ಯಾನ್ಸರ್ ಉಂಟು ಮಾಡಬಲ್ಲವು ಎಂದು ಈ ಹಿಂದೆ ಆಹಾರ ಇಲಾಖೆ ಅವುಗಳ ವಿರುದ್ಧ ಕ್ರಮ ಕೈಗೊಂಡಿತ್ತು. ರಾಸಾಯನಿಕ, ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿತ್ತು. ಇದೀಗ ಅನೇಕರ ನೆಚ್ಚಿನ ಆಹಾರ ಇಡ್ಲಿಯ ಬಗ್ಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಬೆಂಗಳೂರಿನ ಯಾವುದೇ ಮೂಲೆಗೆ ಹೋದ್ರು ನಮ್ಮ ಹೊಟ್ಟೆ ತುಂಬಿಸೋ ತಿಂಡಿ. ಹಾಗೇ ಬ್ಯಾಚುಲರ್ಸ್‌ಗಳ ಬಾದಾಮಿ ಅಂದ್ರೆ ಇಡ್ಲಿನೇ.. ಬೇರೆ ಬೇರೆ ಊರಿನಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರೋರ ಹೊಟ್ಟೆನ್ನ ಇಡ್ಲಿ ತುಂಬಿಸುತ್ತೆ.. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ಇಡ್ಲಿ. ಇದನ್ನೀಗ ಎಲ್ಲೆಡೆ ತಯಾರಿಸಲಾಗುತ್ತದೆ. ಬಹುತೇಕ ಜನ ಬೆಳಗಿನ ತಿಂಡಿಗೆ ಇಂಡ್ಲಿಯನ್ನೇ ತಿನ್ನುತ್ತಾರೆ. ಆದ್ರೆ ಇಡ್ಲಿ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಆಹಾರ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ತಿಳಿದು ಬಂದಿದೆ. ಇಡ್ಲಿ ಗುಣಮಟ್ಟ ಪರೀಕ್ಷೆಯಲ್ಲಿ ಈ ವಿಚಾರ ಬಹಿರಂಗಗೊಂಡಿದ್ದು ಇಡ್ಲಿ ಪ್ರಿಯರು ಶಾಕ್ ಆಗಿದ್ದಾರೆ.
ಇಡ್ಲಿಯಿಂದ ಬರುತ್ತೆ ಕ್ಯಾನ್ಸರ್
ಇತ್ತೀಚೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಆಹಾರ ಇಲಾಖೆ ಜಂಟಿಯಾಗಿ ಬೆಂಗಳೂರಿನ ಸಾಕಷ್ಟು ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತು. 15 ದಿನಗಳ ಕಾಲ ದಾಳಿ ಮಾಡಿ 500 ಇಡ್ಲಿ ಸ್ಯಾಂಪಲ್ಸ್ ಸಂಗ್ರಹಿಸಲಾಗಿತ್ತು. ಇದರಲ್ಲಿ 35ಕ್ಕೂ ಹೆಚ್ಚು ಇಡ್ಲಿ ಡೇಂಜರ್ ಎಂದು ವರದಿ ಬಂದಿದೆ. ಅಲ್ಲದೆ ಈ ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಇಡ್ಲಿ ಹೇಗೆ ಕ್ಯಾನ್ಸರ್‌ಗೆ ಕಾರಣ?
ಇಡ್ಲಿ ತಯಾರಿಸಲು ತಯಾರಕರು ಪ್ಲ್ಯಾಸ್ಟಿಕ್ ಹಾಗೂ ಬಟ್ಟೆಗಳನ್ನು ಬಳಸುತ್ತಾರೆ. ಇದರ ಬಳಕೆಯಿಂದಾಗಿ ಇಡ್ಲಿಯಲ್ಲಿ ಕ್ಯಾನ್ಸರ್ ಅಂಶ ಸೇರಿಕೊಳ್ಳುತ್ತದೆ ಎಂದು ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಇದರಿಂದಾಗಿ ಹಲವೆಡೆ ತಯಾರಾಗುವ ಇಡ್ಲಿಗಳಲ್ಲಿ ಕ್ಯಾನ್ಸರ್ ಹರಡುವ ಅಂಶ ಪತ್ತೆಯಾಗಿದೆ. ಇದು ಸೇವನೆಗೆ ಯೋಗ್ಯವಲ್ಲ, ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುವುದು ಮಾತ್ರವಲ್ಲದೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ವರದಿಯಿಂದ ತಿಳಿದು ಬಂದಿದೆ.
ಎಲ್ಲಾ ಇಡ್ಲಿಯಿಂದಲೂ ಕ್ಯಾನ್ಸರ್ ಬರುತ್ತಾ?
ಹಾಗಾದರೆ ಎಲ್ಲಾ ಇಡ್ಲಿ ಸೇವನೆಯಿಂದಲೂ ಕ್ಯಾನ್ಸರ್ ಬರುತ್ತಾ? ಈ ಪ್ರಶ್ನೆಗೆ ಉತ್ತರ ಇಲ್ಲ. ಮನೆಯಲ್ಲಿ ಶುಚಿಯಾಗಿ ಇಡ್ಲಿ ತಯಾರಿಸುವುದರಿಂದ ಯಾವುದೇ ರೀತಿಯಿಂದಲೂ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ. ಆದರೆ ಬೀದಿ ಬದಿ, ಫುಡ್ ಸ್ಟ್ರೀಟ್ ಹಾಗೂ ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಗೂ ಬಟ್ಟೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅತೀ ಹೆಚ್ಚು ಕ್ಯಾನ್ಸರ್ ರೋಗಿಗಳು ಇದ್ದಾರೆ. ಇದಕ್ಕೆ ಹಲವಾರು ಕಾರಣಗಳು ಇವೆ. ಇದರಲ್ಲಿ ಇದೂ ಕೂಡ ಒಂದು ಕಾರಣ ಆಗಿರಬಹುದು. ಇತ್ತೀಚೆಗೆ ಕಬಾಬ್, ಗೋಬಿ, ಪಾನಿಪೂರಿ ಗುಣಮಟ್ಟವನ್ನು ಪರಿಶೀಲನೆ ಮಾಡಿ ಆಹಾರ ಮತ್ತು ಗುಣಮಟ್ಟ ಇಲಾಖೆ ಕಲಬೆರಕೆ ಮಾಡಲಾಗಿದೆ ಎಂದು ವರದಿ ನೀಡಿತ್ತು. ಇದೀಗ ಇಡ್ಲಿ ಸರದಿ ಬಂದಿದೆ. ಕೆಲ ಕಡೆ ಇಡ್ಲಿ ತಯಾರಕರು ಬಟ್ಟೆ ಹಾಗೂ ಪ್ಲಾಸ್ಟಿಕ್ ಬಳಕೆ ಮಾಡಿ ಇಡ್ಲಿ ತಯಾರಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹೀಗಾಗಿ ಈ ಬಗ್ಗೆ ಜಾಗರೂಕತೆ ಮೂಡಿಸಲು ಎಲ್ಲಾ ವರದಿ ಬರಲು ಇಲಾಖೆಯ ಅಧಿಕಾರಿಗಳು ಕಾಯುತ್ತಿದ್ದಾರೆ.
ಇಡ್ಲಿ ಮಾಡುವಾಗ ಪ್ಲಾಸ್ಟಿಕ್ ಬಳಕೆ ನಿಷೇಧ
ಸುದ್ದಿ ವೈರಲ್ ಆದ ಬಳಿಕ ಆರೋಗ್ಯ ಇಲಾಖೆ ಇನ್ಮುಂದೆ ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಹಾಗೂ ಬಟ್ಟೆಗಳನ್ನು ಬಳಸದಂತೆ ನಿಷೇಧ ಹೇರಿದೆ. ಹೋಟೆಲ್, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ಇನ್ನು ಮುಂದೆ ಬಳಸುವಂತಿಲ್ಲ. ಆಹಾರ ತಯಾರಿಕೆ, ವಿತರಣೆ ವೇಳೆ ಕೂಡ ಪ್ಲಾಸ್ಟಿಕ್ ಬಳಸಬಾರದು. ಆಹಾರದ ಬಿಸಿಗೆ ಪ್ಲಾಸ್ಟಿಕ್ ನಿಂದ ಹೊರಸೂಸುವ ಪದಾರ್ಥಗಳು ವಿಷಕಾರಿಯಾಗುತ್ತಿದ್ದು ಕ್ಯಾನ್ಸರ್ ಕಾರಕ ಅಂಶಗಳನ್ನು ಸಹ ಹೊರಸೂಸುತ್ತದೆ ಎಂದು ವರದಿಯಿಂದ ದೃಢಪಟ್ಟಿದೆ, ಈ ಹಿನ್ನೆಲೆಯಲ್ಲಿ ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬದಲಿಗೆ ಬಟ್ಟೆಯನ್ನೇ ಬಳಸಬೇಕು ಎಂದು ಕಡ್ಡಾಯವಾಗಿ ನಿಯಮ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗೂಂಡುರಾವ್ ತಿಳಿಸಿದ್ದಾರೆ. ಒಟ್ನಲ್ಲಿ ಈಗಿನ ಕಾಲದಲ್ಲಿ ಯಾವುದನ್ನ ತಿನ್ನಬೇಕು ಯಾವುದನ್ನ ಬಿಡಬೇಕು ಅನ್ನೋದೇ ಗೊತ್ತಾಗಲ್ಲ.