ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ 600 ಕೆಜಿ ಮಾವಿನಹಣ್ಣು ಕಳಿಸಿದ ಬಾಂಗ್ಲಾ ಪ್ರಧಾನಿ!

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ 600 ಕೆಜಿ ಮಾವಿನಹಣ್ಣು ಕಳಿಸಿದ ಬಾಂಗ್ಲಾ ಪ್ರಧಾನಿ!

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರಿಗೆ ಮಾವಿನ ಹಣ್ಣು ಕಳಿಸಿ ಸುದ್ದಿಯಾಗಿದ್ದರು. ಆದರೆ ಈಗ ದೀದಿಗೇ 600 ಕೆಜಿ ಮಾವಿನ ಹಣ್ಣುಗಳನ್ನ ಉಡುಗೊರೆಯಾಗಿ ನೀಡಲಾಗಿದೆ. ಈ ಬಾರಿ ಪ್ರಧಾನಿಯೇ ಮಮತಾಗೆ ಮಾವಿನ ಹಣ್ಣು ಕಳಿಸಿ ಕೊಟ್ಟಿದ್ದಾರೆ. ಹಾಗಂತ ಅವರು ನಮ್ಮ ದೇಶದ ಪ್ರಧಾನಿ ಅಲ್ಲ. ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ ಅನ್ನೋದೇ ವಿಶೇಷ.

ಹೌದು. ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ ದೀದಿಗೇ 600 ಕೆಜಿ ಮಾವಿನ ಹಣ್ಣು ಕಳಿಸಿದ್ದಾರೆ. ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಬಾಂಗ್ಲಾ ಪ್ರಧಾನಿ ಹಸೀನಾ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು. ರಾಜತಾಂತ್ರಿಕ ಪ್ರಯತ್ನಗಳ ಭಾಗವಾಗಿ ಬಾಂಗ್ಲಾದೇಶದ ಪ್ರಧಾನಿ ಈ ಸಲ ಮಮತಾ ಬ್ಯಾನರ್ಜಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ : ಡಿಕೆಶಿ ನೀಡಿದ ಟಾಸ್ಕ್ ಗೆಲ್ತಾರಾ ಜಗದೀಶ್ ಶೆಟ್ಟರ್? – ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಹೊಸ ಟ್ರಿಕ್ಸ್!  

ಇತ್ತೀಚೆಗಷ್ಟೇ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ನಂಬರ್ 1 ತಳಿಗಳಾದ ಹಿಮಸಾಗರ, ಲಕ್ಷ್ಮಣಭೋಗ್ ಮತ್ತು ಫಾಸ್ಲಿ ಸೇರಿದಂತೆ ನಾಲ್ಕು ಕಿಲೋಗ್ರಾಂಗಳಷ್ಟು ವಿವಿಧ ತಳಿಯ ಮಾವಿನ ಹಣ್ಣುಗಳನ್ನು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ ಪ್ರಧಾನಿ ನಿವಾಸಕ್ಕೆ ಕಳುಹಿಸಿದ್ದರು. ಮಾವಿನ ಹಣ್ಣುಗಳನ್ನು ಸುಂದರವಾದ ಉಡುಗೊರೆ ಪೆಟ್ಟಿಗೆಯಲ್ಲಿ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಆಪ್ತ ಮೂಲಗಳು ತಿಳಿಸಿದ್ದವು.

ಮೋದಿ ಅವರಿಗಷ್ಟೇ ಅಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಮಾವಿನ ಹಣ್ಣನ್ನು ಕಳುಹಿಸಿ, ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದರು. 2019 ರ ದುರ್ಗಾ ಪೂಜೆಯ ಸಂದರ್ಭದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಗೆ ಕುರ್ತಾ, ಪೈಜಾಮ ಮತ್ತು ಸಿಹಿತಿಂಡಿಗಳನ್ನು ಕಳುಹಿಸಿದ್ದರು ಎಂದು ಸ್ವತಃ ಪ್ರಧಾನಿ ಮೋದಿ ಬಹಿರಂಗಪಡಿಸಿದ್ದರು. ವಿರೋಧ ಪಕ್ಷಗಳಲ್ಲಿ ನನಗೆ ಅನೇಕ ಸ್ನೇಹಿತರಿದ್ದಾರೆ ಎಂದು ಹೇಳಿದ್ದರು.

suddiyaana