ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ICT ಕೋರ್ಟ್‌ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಬಾಂಗ್ಲಾದೇಶದಲ್ಲಿ ಬಹುದೊಡ್ಡ ಮಟ್ಟದಲ್ಲಿ ನಡೆದ ದಂಗೆಗೆ ಶೇಖ್‌ ಹಸೀನಾ ಅವರ ಪ್ರಚೋದನಕಾರಿ ಹೇಳಿಕೆಯೇ ಕಾರಣ ಎಂದು ತೀರ್ಪು ಹೇಳಲಾಗಿದೆ. ನ್ಯಾಯಮಂಡಳಿಯು ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ICT ಕೋರ್ಟ ತೀರ್ಪನ್ನು ನೀಡಿದೆ.

ಇದನ್ನೂ ಓದಿ: ರುತುರಾಜ್ ಗಾಯಕ್ವಾಡ್ CSK ಕ್ಯಾಪ್ಟನ್ – ರಾಜಸ್ಥಾನ್‌ ರಾಯಲ್ಸ್‌ಗೆ ಕುಮಾರ ಸಂಗಕ್ಕಾರ  ಹೆಡ್ ಕೋಚ್

ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ತುಜಾ ಮಜುಂದಾರ್ ನೇತೃತ್ವದ ತ್ರಿಸದಸ್ಯ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಕಮಾಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧುರಿ ಅಬ್ದುಲ್ಲಾ ಅಲ್-ಮಾಮುನ್ ಅವರಿಗೂ ಮರಣದಂಡನೆ ವಿಧಿಸಲಾಗಿದೆ. ಹಸೀನಾ ಮತ್ತು ಕಮಲ್ ಅವರನ್ನು ಪರಾರಿಯಾಗಿರುವ ಅಪರಾಧಿಗಳೆಂದು ಘೋಷಿಸಿ ಗೈರುಹಾಜರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.

Kishor KV