ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಬಾಂಗ್ಲಾ – ಸ್ಕಾಟ್ಲೆಂಡ್ ತಂಡಕ್ಕೆ ಚಾನ್ಸ್

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್‌ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿರುವ ಕಾರಣ ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್ ತಂಡಕ್ಕೆ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗಲಿದೆ.
ಇದನ್ನೂ ಓದಿ: ಡೆತ್ ಓವರ್ ಸ್ಪೆಷಲಿಸ್ಟ್ ರಿಂಕು – ಬೆಂಚ್ ಕಾಯಿಸಿದ್ದ BCCIಗೆ ಶೇಮ್
ಇಂದು ನಡೆದ ಸಭೆಯಲ್ಲಿ ಬಿಸಿಬಿ ಅಧ್ಯಕ್ಷ ಅಮೀನುಲ್, ಸಿಇಒ ನಿಜಾಮುದ್ದೀನ್ ಮತ್ತು ಕೆಲವು ಬಾಂಗ್ಲಾದೇಶ ಆಟಗಾರರು ಭಾಗವಹಿಸಿದ್ದರು. ವರದಿಯ ಪ್ರಕಾರ, ಬಾಂಗ್ಲಾ ತಂಡದ ಆಟಗಾರರಿಗೆ ವಿಶ್ವಕಪ್‌ನಲ್ಲಿ ಭಾಗವಹಿಸುವ ಇರಾದೆಯಿದೆ. ಆದರೆ ಬಿಸಿಬಿ ಮತ್ತು ಬಾಂಗ್ಲಾ ಸರ್ಕಾರಕ್ಕೆ ಮಾತ್ರ ತನ್ನ ತಂಡವನ್ನು ಭಾರತಕ್ಕೆ ಕಳುಹಿಸುವ ಮನಸ್ಸಿಲ್ಲ.
ಹೀಗಾಗಿ ಸಭೆಯ ಬಳಿಕ ಮಾತನಾಡಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧ್ಯಕ್ಷ, ‘ಭಾರತದ ಹೊರಗೆ ಪಂದ್ಯಗಳನ್ನು ನಡೆಸಬೇಕೆಂಬ ನಮ್ಮ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಹೀಗಾಗಿ ತಮ್ಮ ತಂಡವು ಕೂಡ ಭಾರತದಲ್ಲಿ ಒಂದೇ ಒಂದು ಪಂದ್ಯವನ್ನು ಆಡುವುದಕ್ಕೆ ಸಿದ್ಧವಿಲ್ಲ. ಇದು ಐಸಿಸಿಯ ವೈಫಲ್ಯ, ಐಸಿಸಿ ನಮ್ಮ ತಂಡದ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸಲಿಲ್ಲ. ನಮಗೆ ವಿಶ್ವ ಕ್ರಿಕೆಟ್ ಬಗ್ಗೆ ತಿಳಿದಿಲ್ಲ, ಆದರೆ ಅದರ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಐಸಿಸಿ 200 ಮಿಲಿಯನ್ ಜನರನ್ನು ನಿರಾಶೆಗೊಳಿಸಿದೆ’.

ನೋಡಿರಿ

