ಬೆಂಗಳೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರ್ಜರಿ ತಯಾರಿ – ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆ

ಬೆಂಗಳೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರ್ಜರಿ ತಯಾರಿ – ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆ

ಸೆಪ್ಟೆಂಬರ್ 6. ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಬೆಂಗಳೂರಿನಲ್ಲಿಯೂ ಕೃಷ್ಣ ಜನ್ಮಾಷ್ಟಮಿಯನ್ನು ಬಹಳ ವಿಜೃಂಭಣೆಿಯಿಂದ ಆಚರಿಸಲಾಗುತ್ತಿದೆ. ಹೀಗಾಗಿ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧ ಮಾಡಿದೆ. ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ: ‘ಮೊಸರು ಕುಡಿಕೆ’ ಎತ್ತರ 14 ಅಡಿ ಮಾತ್ರ!  -ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಹೊಸ ಗೈಡ್‌ ಲೈನ್ಸ್‌

ರಾಜ್ಯಾದ್ಯಂತ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ತಯಾರಿ ಜೋರಾಗಿಯೇ ಸಾಗುತ್ತಿದೆ. ಇದರ ಮಧ್ಯೆ ಸೆ.06ರಂದು ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯಲ್ಲಿ ‘ಪ್ರಾಣಿ ವಧೆ ಮತ್ತು ಮಾಂಸ’ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಸುತ್ತೋಲೆ ಹೊರಡಿಸಿದೆ. ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅಥವಾ ಶ್ರೀ ಕೃಷ್ಣ ಜನ್ಮೋತ್ಸವವನ್ನು ಆಚರಿಸಲಾಗುತ್ತದೆ. ಈ ದಿನ ಶ್ರೀ ಕೃಷ್ಣನು ರೋಹಿಣಿ ನಕ್ಷತ್ರದಲ್ಲಿ ಜನಿಸಿದನು ಎನ್ನಲಾಗುತ್ತೆ. ಈ ದಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

suddiyaana