ಬೆಂಗಳೂರಿನಲ್ಲಿ ಗಣೇಶ ಚತುರ್ಥಿಗೆ ಸಕಲ ಸಿದ್ಧತೆ- 75 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದ ಬಿಬಿಎಂಪಿ

ಗಣೇಶ ಚತುರ್ಥಿ ಸಂಭ್ರಮಕ್ಕೆ ಇನ್ನೊಂದೇ ದಿನ. ಹೀಗಾಗಿ ಬೆಂಗಳೂರಿನಲ್ಲಿ ಗಣೇಶನ ಆಗಮನಕ್ಕೆ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ.
ಇದನ್ನೂ ಓದಿ:ಗೌರಿ–ಗಣೇಶ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಗುಡ್‌ನ್ಯೂಸ್! – KSRTCಯಿಂದ 1,500 ವಿಶೇಷ ಬಸ್
ಗಣೇಶನ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದೆ. ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅಗತ್ಯವಿರುವ ಅನುಮತಿ ಪಡೆಯಲು ಬಿಬಿಎಂಪಿ ಏಕಗವಾಕ್ಷಿ ಕೇಂದ್ರಗಳನ್ನು (One-Window Centers) ಸ್ಥಾಪಿಸಿದೆ. ನಗರದಾದ್ಯಂತ ಒಟ್ಟು 75 ಕೇಂದ್ರಗಳು ಸ್ಥಾಪಿತವಾಗಿದ್ದು, ಇಲ್ಲಿ ನಾಗರಿಕರು ಸುಲಭವಾಗಿ ಅನುಮತಿ ಪಡೆಯಬಹುದು.
ಬೆಂಗಳೂರಿನಾದ್ಯಂತ 489 ತಾತ್ಕಾಲಿಕ ಸಂಚಾರಿ ಕಲ್ಯಾಣ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಒದಗಿಸಲಿದೆ. ಅದಲ್ಲದೇ ಬಿಬಿಎಂಪಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.
ನಗರದಲ್ಲಿ ಒಟ್ಟು 41 ಕೆರೆ ಅಂಗಳಗಳಲ್ಲಿ ಶಾಶ್ವತ ಹಾಗೂ ತಾತ್ಕಾಲಿಕ ಕಲ್ಯಾಣಿಗಳು ನಿರ್ಮಿಸಲಾಗಿದ್ದು, ಸಾರ್ವಜನಿಕರು ಸುಗಮವಾಗಿ ಗಣೇಶ ವಿಸರ್ಜನೆ ಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ನಗರದ ವಿವಿಧ ಭಾಗಗಳಲ್ಲಿ 489 ತಾತ್ಕಾಲಿಕ ಸಂಚಾರಿ ವಾಹನಗಳನ್ನು ನಿಯೋಜಿಸಲಾಗಿದೆ. ಪ್ರತಿಯೊಂದು ವಾರ್ಡ್ ಮಟ್ಟದಲ್ಲಿಯೂ ಸಂಚಾರಿ ಕಲ್ಯಾಣಿ ವ್ಯವಸ್ಥೆ ಮಾಡಲಾಗಿದ್ದು, ಮೂರ್ತಿ ವಿಸರ್ಜನೆಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ.
ಇನ್ನೂ ರಾಜರಾಜೇಶ್ವರಿ ನಗರ (Raja Rajeshwari Nagar) ವಲಯ ವ್ಯಾಪ್ತಿಯಲ್ಲಿ ಬರುವ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಆದರೆ ಈ ಬಾರಿ ತಾಂತ್ರಿಕ ಕಾರಣಗಳಿಂದ ಹೇರೋಹಳ್ಳಿ ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಯಡಿಯೂರು ಕೆರೆಯಲ್ಲಿ (Yadiyuru Lake) ಗಣೇಶ ವಿಸರ್ಜನೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆ.27ರಿಂದ ಸೆ.17ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಅವಕಾಶ ನೀಡಿದೆ.

ನೋಡಿರಿ

