ಬೆಂಗಳೂರಿನ ಹೋಟೆಲ್‌, ಪಬ್‌, ಬಾರ್‌ಗಳಿಗೆ ಶಾಕ್!‌ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ಕ್ಯಾನ್ಸಲ್!

ಬೆಂಗಳೂರಿನ ಹೋಟೆಲ್‌, ಪಬ್‌, ಬಾರ್‌ಗಳಿಗೆ ಶಾಕ್!‌ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ಕ್ಯಾನ್ಸಲ್!

ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಸಿಲಿಕಾನ್ ಸಿಟಿಯಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೋಟೆಲ್‌ಗಳಿಗೆ ಇತ್ತೀಚೆಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಬಿಬಿಎಂಪಿ ನೋಟಿಸ್ ಜಾರಿ ಮಾಡಿದರೂ ಪ್ರತಿಕ್ರಿಯಿಸದ ಹೋಟೆಲ್‌ಗಳು, ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.

ಇದನ್ನೂ ಓದಿ: 8 ತಿಂಗಳು..  ಕ್ರಿಕೆಟ್ ನಿಂದ 18 ದಿಗ್ಗಜರ ನಿವೃತ್ತಿ – 2025ರ ವಿದಾಯ ಲಿಸ್ಟ್ ನಲ್ಲಿ ಯಾರೆಲ್ಲಾ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮೋಕಿಂಗ್ ಝೋನ್ ನಿರ್ಮಾಣ ಮಾಡಿಲ್ಲ ಅಂತಾ ನೋಟಿಸ್ ನೀಡಿ ಎಚ್ಚರಿಸಿತ್ತು. ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ಸರಿಪಡಿಸಿಕೊಂಡಿಲ್ಲ ಎಂಬ ಮಾಹಿತಿ ಬಿಬಿಎಂಪಿ ಪರಿಶೀಲನೆ ವೇಳೆ ಗೊತ್ತಾಗಿದೆ. ಹೀಗಾಗಿ ಅಂತಹ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ.

ಇನ್ನೂ ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ.

ಬೆಂಗಳೂರಿನಲ್ಲಿರುವ ಎಲ್ಲಾ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ನಿಯಮಾನುಸಾರ ಕ್ರಮವಹಿಸಬೇಕು. ಸ್ಮೋಕಿಂಗ್ ಝೋನ್ ಕಡ್ಡಾಯ ಇರಲೇಬೇಕು. ಇಲ್ಲದೇ ಹೋದರೆ ಕೇಸ್ ಹಾಕಿ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.

Shwetha M