ಆಸ್ತಿ ತೆರಿಗೆ ಬಾಕಿ – ಬೆಂಗಳೂರಿನ ಮತ್ತೊಂದು ಮಾಲ್‌ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ ಅಧಿಕಾರಿಗಳು!
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡ ಮಾಲೀಕರಿಗೆ ಬಿಬಿಎಂಪಿ ಶಾಕ್ ನೀಡಲು ಮುಂದಾದಿದೆ. ಇದೀಗ ತೆರಿಗೆ ಬಾಕಿ ಉಳಿಸಿಕೊಂಡಿರುವ ರಾಕ್ಲೈನ್ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ನವಾಜ್ ಷರೀಫ್ ಸಹೋದರ ಶಹಬಾಜ್ ಷರೀಫ್ ಆಯ್ಕೆ
ತೆರಿಗೆ ಪಾವತಿ ಬಾಕಿ ಹಿನ್ನಲೆಯಲ್ಲಿ ಬೆಂಗಳೂರಿನ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಒಡೆತನದ ರಾಕ್ಲೈನ್ ಮಾಲ್ 2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಟಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದರೂ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್‌ಗೆ ಬೀಗಮುದ್ರೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ತೆರಿಗೆ ಪಾವತಿ ಬಾಕಿ ಉಳಿಸಿಕೊಂಡ ಆರೋಪದ ಮೇಲೆ ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದಾರೆ.