ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋ*ಟ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆ! – 8 ಜನ ಮೃತಪಟ್ಟರೂ ಮಾಲೀಕರ ವಿರುದ್ಧ ದಾಖಲಾಗದ ದೂರು

ಬೆಳಗಾವಿಯ ಬೈಲಹೊಂಗಲ ತಾಲ್ಲೂಕಿನಲ್ಲಿ ಘೋರ ದುರಂತ ಸಂಭವಿಸಿದೆ. ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡಿದ್ದು, ಈ ದುರಂತದಲ್ಲಿ ಸಾವಿಸ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಶಬರಿಮಲೆಗೆ ಹೋಗಿ ಬರುತ್ತಿದ್ದ ವೇಳೆ ಭೀಕರ ಅಪಘಾತ – ಪಕ್ಕದಲ್ಲಿ ಮಲಗಿದ್ದ ಮಗಳು ಹೆಣವಾದಳು!
ಸಕ್ಕರೆ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗಿಳಿಹೊಸುರ ಗ್ರಾಮದ ಕಾರ್ಮಿಕ ರಾಘವೇಂದ್ರ ಮೃತಪಟ್ಟಿದ್ದಾರೆ. ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಸುರಕ್ಷತೆಗೆ ಆದ್ಯತೆ ನೀಡಬೇಕಿದ್ದ ಕಾರ್ಖಾನೆ ಆಡಳಿತ ಮಂಡಳಿ ತೋರಿದ ಬೇಜವಾಬ್ದಾರಿಯಿಂದ ಎಂಟು ಅಮಾಯಕ ಜೀವಗಳು ಬಲಿಯಾಗಿವೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ಪೊಲೀಸರು ಕೇವಲ ಕಾರ್ಖಾನೆಯ ಜನರಲ್ ಮ್ಯಾನೇಜರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿ, ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಕೈತೊಳೆದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಘಟನೆ ನಡೆದು ಎರಡು ದಿನಗಳಾದರೂ ಯಾರನ್ನೂ ಬಂಧಿಸದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕ್ರಮ್ ಇನಾಮದಾರ, ವಿಜಯ ಮೆಟಗುಡ್ಡ ಮತ್ತು ಪ್ರಭಾಕರ್ ಕೋರೆ ಪಾಲುದಾರಿಕೆಯಲ್ಲಿ ನಡೆಯುತ್ತಿರುವ ಈ ಕಾರ್ಖಾನೆಯ ಮೇಲೆ ಪ್ರಭಾವಿಗಳ ಒತ್ತಡದಿಂದ ತನಿಖೆ ದಿಕ್ಕು ತಪ್ಪಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
8ರಲ್ಲಿ ಓರ್ವ ಮೃತರ ಕುಟುಂಬಕ್ಕೆ ಮಾತ್ರ ಪರಿಹಾರ ಘೋಷಣೆ
ಇತ್ತ ಮೃತರ ಕುಟುಂಬಸ್ಥರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಚನ್ನಮ್ಮ ವೃತ್ತದಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರೂ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಎಂಟು ಜನರಲ್ಲಿ ಕೇವಲ ಒಬ್ಬ ಮೃತ ಕಾರ್ಮಿಕನ ಕುಟುಂಬಕ್ಕೆ ಮಾತ್ರ 18 ಲಕ್ಷ ರೂ. ಪರಿಹಾರ ಭರವಸೆ ನೀಡಲಾಗಿದೆ. ಉಳಿದ ಕುಟುಂಬಗಳಿಗೆ ಪರಿಹಾರದ ಕುರಿತು ಯಾವುದೇ ಅಧಿಕೃತ ಘೋಷಣೆ ಮಾಡಿರದ ಕಾರಣ ಬಡವರ ಜೀವಕ್ಕೆ ಬೆಲೆ ಇಲ್ಲವೇ ಎಂದು ಮೃತರ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ನೋಡಿರಿ

