ಬೆಳಗಾವಿ ಗ್ರೇಡ್ – 2 ತಹಶೀಲ್ದಾರ್ ಸಾವು ಪ್ರಕರಣ – ಪತ್ನಿ ವಿರುದ್ಧವೇ ಆರೋಪ ಕೇಳಿಬಂದಿದ್ಯಾಕೆ..?

ಬೆಳಗಾವಿ ಗ್ರೇಡ್ – 2 ತಹಶೀಲ್ದಾರ್ ಸಾವು ಪ್ರಕರಣ – ಪತ್ನಿ ವಿರುದ್ಧವೇ ಆರೋಪ ಕೇಳಿಬಂದಿದ್ಯಾಕೆ..?

ಬೆಳಗಾವಿ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ ಸಾವು ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್​ ಮೊದಲ ಬಾರಿಗೆ ಶಾಸಕರಾಗಿದ್ದ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ‌ಅಶೋಕ‌್ ಮಣ್ಣಿಕೇರಿ, ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ ಮತ್ತು ಆಕೆಯ ಸಹೋದರ ಸ್ಯಾಮ್ಯುಯೆಲ್ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಮೃತ ಅಶೋಕ್​ ಕುಟುಂಬಸ್ಥರು ಈ ಬಗ್ಗೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದು,  ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಬೈಕ್‌, ಆಟೋಗಳಿಗೆ ನಿಷೇಧ! – ಯಾವಾಗಿಂದ ನಿರ್ಬಂಧ?

ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ವಾಸವಿದ್ದರು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಆತನ ಪತ್ನಿ ಮತ್ತು ಸಹೋದರ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಶೋಕ್ ಮಣ್ಣಿಕೇರಿ ಮೃತಪಟ್ಟಿದ್ದರು. ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಠಾಣೆಗೆ ಅಶೋಕ್ ಮಣ್ಣಿಕೇರಿ ಸಹೋದರಿ ದೂರು ನೀಡಿದ್ದಾರೆ. ಇದೇ ವೇಳೆ ಪೊಲೀಸ್ ಠಾಣೆಗೆ ಬಂದಿದ್ದ ಮೃತ ಅಶೋಕ್ ಪತ್ನಿ ಭೂಮಿ, ಅಶೋಕ್ ಪತ್ನಿಯ ಸಹೋದರ ಸ್ಯಾಮ್ಯುಯಲ್ ಮೇಲೆ ಹಲ್ಲೆಗೆ ಯತ್ನಿಸಿದರು. ತಕ್ಷಣ ಅಶೋಕ್ ಪತ್ನಿ ಭೂಮಿ, ಸ್ಯಾಮ್ಯುಯಲ್ನನ್ನು ಪೊಲೀಸರು ರಕ್ಷಿಸಿ ಕರೆದೊಯ್ದರು. ತಮ್ಮನ ಸಾವಿನ ಬಗ್ಗೆ ತನಿಖೆ ಆಗಬೇಕು ಎಂದು ಅಶೋಕ್ ಮಣ್ಣಿಕೇರಿ ಅಕ್ಕ ಗಿರಿಜಾ ಒತ್ತಾಯಿಸಿದರು. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕರಾಗಿ ಸೇವೆ ಸಲ್ಲಿಸಿದ್ದ ಅಶೋಕ್ ಮಣ್ಣೀಕೇರಿ 2018ರ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆದ್ದಾಗ ಅವರ ಆಪ್ತ ಸಹಾಯಕರಾಗಿದ್ದರು. ಅಶೋಕ್ ಮಣ್ಣಿಕೇರಿ ಅಕಾಲಿಕ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ವ್ಯಕ್ತಪಡಿಸಿದರು. ಅಶೋಕ್ ಮಣ್ಣಿಕೇರಿ ಪಾರ್ಥಿವ ಶರೀರ ಅಂತಿಮ ದರ್ಶನವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಡೆದರು. ಪುಷ್ಪ ನಮನ ಸಲ್ಲಿಸಿ ಅಶೋಕ್ ಮಣ್ಣಿಕೇರಿ ಆತ್ಮಕ್ಕೆ ಶಾಂತಿಕೋರಿದರು. ಅಶೋಕ ಮಣ್ಣಿಕೇರಿ ನಿಧನ ತೀವ್ರ ನೋವುಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿ ಕಳೆದುಕೊಂಡಿದ್ದೇವೆ ಎಂದು ಸಚಿವೆ ಹೆಬ್ಬಾಳ್ಕರ್ ಕಂಬನಿ ಮಿಡಿದಿದ್ದಾರೆ. ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಕ್ತಾಯದ ಬೆಳಗಾವಿಯ ವೈಭವ ನಗರದ ಮನೆಗೆ ಅಶೋಕ್ ಮೃತದೇಹ ಆಗಮಿಸಿತು. ಅಂತಿಮ ವಿಧಿವಿಧಾನ ಕಾರ್ಯ ಕುಟುಂಬಸ್ಥರು ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಿದರು.

suddiyaana