ಬೆಳಗಾವಿ ಜೈನ ಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ – ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ ಜೈನ ಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ – ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರು.  ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜೈನಮುನಿಯನ್ನ ಒಬ್ಬರಲ್ಲ ಇಬ್ಬರೂ ಸೇರಿ ಕೊಲೆ ಮಾಡಿದ್ರು – ಎಫ್ ಐಆರ್ ನಲ್ಲಿದೆ ಸ್ಫೋಟಕ ಸತ್ಯ

ಬೆಳಗಾವಿಯಲ್ಲಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಜುಲೈ 19ರಂದು ಸದನಕ್ಕೆ ಮಾಹಿತಿ ನೀಡಿದರು. ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿ ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾಗಿರುವುದರಿಂದ ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದು ಸ್ಪಷ್ಟಡಿಸಿದರು. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಳೆದ ಜುಲೈ 6ರಂದು ಬೆಳಗ್ಗೆಯಿಂದ ನಂದಿ ಕಾಮಕುಮಾರ ಸ್ವಾಮಿಗಳು ಆಶ್ರಮದಲ್ಲಿ ಕಾಣಸಿಗಲಿಲ್ಲ. ಆಗ ಆತಂಕಗೊಂಡ ಭಕ್ತರು ಎಲ್ಲ ಕಡೆ ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು. ಹೀಗಾಗಿ ಪೊಲೀಸರು ರಾತ್ರಿಯಿಂದಲೇ ಕಾರಾರ‍ಯಚರಣೆ ಆರಂಭಿಸಿದ್ದರು. ಜೈನ ಮುನಿಗಳ ದೇಹದ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಆರೋಪಿಗಳು ಎಸೆದಿದ್ದರು. 20 ಅಡಿ ಆಳದಲ್ಲಿ ಶವದ ಭಾಗಗಳು ಪತ್ತೆಯಾಗಿತ್ತು.

suddiyaana