ಬಳ್ಳಾರಿ ಬ್ಯಾನರ್‌ ಗಲಾಟೆ ಕೇಸ್!‌ – ತನಿಖೆ ಸಿಬಿಐಗೆ  ವಹಿಸುವ ಅಗತ್ಯವಿಲ್ಲ ಎಂದ ಪರಮೇಶ್ವರ್‌!

ಬಳ್ಳಾರಿ ಬ್ಯಾನರ್‌ ಗಲಾಟೆ ಕೇಸ್!‌ – ತನಿಖೆ ಸಿಬಿಐಗೆ  ವಹಿಸುವ ಅಗತ್ಯವಿಲ್ಲ ಎಂದ ಪರಮೇಶ್ವರ್‌!

ಬಳ್ಳಾರಿ ಬ್ಯಾನರ್‌ ಗಲಾಟೆ ಈಗ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ಗಲಭೆ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಇದೀಗ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಈ ಬಗ್ಗೆ ಮಾತನಾಡಿದ್ದಾರೆ. ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ  ವಹಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪುರುಷ ಯಾವಾಗ ಅ*ತ್ಯಾಚಾರ ಮಾಡ್ತಾನೋ ಗೊತ್ತಿಲ್ಲ.. ಎಲ್ಲ ಪುರುಷರನ್ನ ಜೈಲಿಗೆ ಹಾಕಿ ಎಂದ ನಟಿ ರಮ್ಯಾ!

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ್‌, ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ  ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮಾರ್ಥ್ಯ ಮತ್ತು ವ್ಯಕ್ತಿತ್ವನೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದರು.

Shwetha M