ಜನಾರ್ದನ ರೆಡ್ಡಿ ಮೆನೆಗೆ ಬೆಂಕಿ – ಅಪ್ರಾಪ್ತರು ಸೇರಿ 8 ಮಂದಿ ಅರೆಸ್ಟ್

ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ನಲ್ಲಿ ಅಗ್ನಿ ದುರಂತಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕರು ಸೇರಿದಂತೆ ಒಟ್ಟು 8 ಮಂದಿಯನ್ನು ಖಾಕಿ ವಶಕ್ಕೆ ಪಡೆದಿದೆ. ಈ ಕುರಿತು ಮಾಹಿತಿ ನೀಡಿರುವ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್ ಹರ್ಷ ”ಅಗ್ನಿ ಅವಘಡದ ಪ್ರಕರಣವನ್ನು ನಾವು ಬೇಧಿಸಿದ್ದೇವೆ. ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಇದರಲ್ಲಿ ಕೆಲವರು ಅಪ್ರಾಪ್ತರಿದ್ದಾರೆ. ಅವರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಚಾರಣೆ ಪೂರ್ಣಗೊಂಡ ಬಳಿಕ ಇತರ ಮಾಹಿತಿಯನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಎರಡು ವರ್ಷಗಳ ನಂತರ ಇಶಾನ್ ಕಿಶನ್ ಭರ್ಜರಿ ಬ್ಯಾಟಿಂಗ್ – ತಂಡಕ್ಕೆ ಆಸರೆಯಾದ ಇಶಾನ್ಗೆ ಸೂರ್ಯನ ಭಾವನಾತ್ಮಕ ಅಪ್ಪುಗೆ
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸೈಟ್ ಎಂಜಿನಿಯರ್ ರಿಜ್ವಾನ್ ನೀಡಿದ ದೂರಿನ ಮೇರೆಗೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 8 ರಿಂದ 10 ಜನ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ 1 ಕೋಟಿ 25 ಲಕ್ಷ ಮೌಲ್ಯದ ಪರಿಕರಗಳು ನಷ್ಟವಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ ಎಂದು ನಿನ್ನೆ(ಶುಕ್ರವಾರ) ರಾತ್ರಿ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ತೆರಳಿ ಪರಿಶೀಲನೆ ಮಾಡಲಿದೆ. ಈ ಮಾಡೆಲ್ ಹೌಸ್ ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಮನೆ, ಅಲ್ಲಿ ಯಾರೂ ವಾಸವಿಲ್ಲ. ಘಟನೆ ಸಂಬಂಧ ಎಂಟು ಜನರನ್ನು ವಶಕ್ಕೆ ಪಡೆದಿದ್ದೇವೆ. ಅವರಲ್ಲಿ ಆರು ಮಂದಿ ಅಪ್ರಾಪ್ತರು ಹಾಗೂ ಇಬ್ಬರು ವಯಸ್ಕರಿದ್ದಾರೆ. ರಿಲ್ಸ್, ಪೋಟೋ ಶೂಟ್ಗೆ ಸಂಬಂಧಿಸಿದಂತೆ ಈ ಮನೆಗೆ ಭೇಟಿ ನೀಡಿದ್ದರು ಅಂತ ಮಾಹಿತಿ ಸಿಕ್ಕಿದೆ. ಪೋಟೋ ಶೂಟ್ಗಾಗಿ ಮಾಡೆಲ್ ಹೌಸ್ನ ಮೊದಲ ಮಹಡಿಗೆ ಹೋಗಿದ್ದಾರೆ. ಸಿಗರೇಟ್ ವಿಚಾರವಾಗಿ ಬೆಂಕಿ ತಾಗಿರುವ ಶಂಕೆ ಇದೆ. ಆರೋಪಿತರಲ್ಲಿ ಇಬ್ಬರು ಮುಂಬೈಯಿಂದ ಬಂದವರಿದ್ದಾರೆ. ಇವರು ಯಾರೂ ರಾಜಕೀಯ ಹಿನ್ನೆಲೆಯನ್ನು ಹೊಂದಿಲ್ಲ. ಇನ್ನೂ ಪರಿಶೀಲನೆ ಮಾಡಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಮಾಹಿತಿ ನೀಡಿದ್ದಾರೆ.

ನೋಡಿರಿ

