ಪಶ್ಚಿಮ ಬಂಗಾಳದಲ್ಲಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! – ಮೇ.9ರಂದು ನೂತನ ಸಿಎಂ ಪ್ರಮಾಣ ಸ್ವೀಕಾರ!

ಪಶ್ಚಿಮ ಬಂಗಾಳ ವಿಧಾನಸಭಾ ಫಲಿತಾಂಶ ಹೊರಬಿದ್ದಿದ್ದು, ಅಡಳಿತಾರೂಢ ಟಿಎಂಸಿ ಧೂಳೀಪಟವಾಗಿದ್ದರೆ ಬಿಜೆಪಿ 200ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಂಡು ಪ್ರಚಂಡ ಗೆಲುವು ಸಾಧಿಸಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಆಳ್ವಿಕೆಗೆ ತೆರೆ ಬಿದ್ದಿದೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಪ್ರೇಯಸಿಗಾಗಿ ಹೆಂಡ್ತಿಗೆ ಡಿವೋರ್ಸ್! – ಗಂಡನ ಬಿಟ್ಟು ಬರಲು ಒಪ್ಪದಿದ್ದಕ್ಕೆ ಆಕೆಯನ್ನ ಕೊಂದು ತಾನೂ ಜೀವ ಬಿಟ್ಟ ಪಾಗಲ್!
ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 204 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದೀಗ ಬಿಜೆಪಿ ಸರ್ಕಾರ ರಚಿಸಲು ಸಕಲ ತಯಾರಿ ನಡೆಸಿದೆ. ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಲಾಗಿದೆ ಎಂದು ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಬಿಜೆಪಿಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಬದಿಗೊತ್ತಿ, ಮಮತಾ ಬ್ಯಾನರ್ಜಿಯವರ 15 ವರ್ಷಗಳ ಅಧಿಪತ್ಯವನ್ನು ಕೊನೆಗೊಳಿಸಿದೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಮೊದಲ ಬಾರಿಗೆ ಸರ್ಕಾರ ರಚಿಸಲಿದೆ.
ಇನ್ನು ಅಭೂತಪೂರ್ವ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಎಂದಿದ್ದರು. ಈ ಜನಾದೇಶವು ಜನರ ಬದಲಾವಣೆ ಮತ್ತು ಭಯದಿಂದ ಮುಕ್ತ ಭವಿಷ್ಯದ ಬಯಕೆಯನ್ನು ಪ್ರತಿಬಿಂಬಿಸುತ್ತದೆ. ಈ. ಫಲಿತಾಂಶದ ಹಿಂದೆ ಮಹಿಳಾ ಮತದಾರರು ನಿರ್ಣಾಯಕ ಶಕ್ತಿಯಿದೆ. ಜೊತೆಗೆ ರಾಜಕೀಯ ಹಿಂಸಾಚಾರವನ್ನು ಕೊನೆಗಾಣಿಸಲು ಜನರು ನಿರ್ಧರಿಸಿದ್ದಾರೆ ಎಂದಿದ್ದರು.

ನೋಡಿರಿ

