ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಕೆಂಪೇಗೌಡ  ಏರ್‌ಪೋರ್ಟ್‌ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದ ವೇಳೆ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದ ಹಿಂದೆ ಇರುವ ಜಾಲ ಹಾಗೂ ವಿದೇಶಿ ಸಂಪರ್ಕಗಳ ಕುರಿತು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Kishor KV

Leave a Reply

Your email address will not be published. Required fields are marked *