ಸಿಲಿಕಾನ್ ಸಿಟಿ ಜನರಿಗೆ ಬಿಗ್ ಶಾಕ್ – ಆಗಸ್ಟ್ 1 ರಿಂದ ಆಟೋ ದರ ಏರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ಬಸ್ ಟಿಕೆಟ್ ದರ, ಮೆಟ್ರೋ ದರ ಏರಿಕೆಯಿಂದಾಗಿ ಕಂಗೆಟ್ಟಿದ್ದಾರೆ. ಇದೀಗ ಮತ್ತೊಂದು ಶಾಕಿಂಗ್ ಸುದ್ದಿಯೊಂದಿದೆ. ಇದೀಗ ಬೆಂಗಳೂರಿನಲ್ಲಿ ಆಟೋ ದರ್ ಏರಿಕೆ ಮಾಡಲಾಗಿದ್ದು, ಮುಂದಿನ ಆಗಸ್ಟ್ 1 ರಿಂದಲೇ ಹೊಸ ದರ ಅನ್ವಯವಾಗಲಿದೆ.
ಇದನ್ನೂ ಓದಿ: ಅಭಿನಯ ಸರಸ್ವತಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ – ನೇತ್ರದಾನದ ಮೂಲಕ ಸರೋಜಾದೇವಿ ಅಮರ
ಆಟೋ ದರ ಏರಿಕೆ ಸಂಬಂಧ ಮೊದಲು ಮಾರ್ಚ್ ತಿಂಗಳಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಹಲವು ಆಟೋ ಸಂಘಟನೆಗಳು ಭಾಗಿಯಾಗಿದ್ದವು. ಆಟೋ ದರ ಪರಿಷ್ಕರಣೆ ಸಮಿತಿಯು ಆಟೋ ಚಾಲಕರ ಅಹವಾಲು ಕೇಳಿತ್ತು. ಅಲ್ಲದೆ ಸಭೆಯ ನಿರ್ಣಯವನ್ನು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿತ್ತು. ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ದರ ಏರಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರಸ್ತುತ ಆಟೋ ಕನಿಷ್ಠ ದರ ಈಗ 30 ರೂಪಾಯಿ ಇದೆ. ಪ್ರತಿ ಕಿಲೋಮೀಟರ್‌ಗೆ 15 ರೂಪಾಯಿ ದರ ಇದೆ. ಆದರೆ, ಹೊಸ ದರ 36 ರೂಪಾಯಿಗೆ ಏರಿಕೆಯಾಗಿದೆ. ಮೊದಲ 2 ಕಿಮೀಗೆ 36 ರೂಪಾಯಿ ಇರಲಿದ್ದು, ನಂತರ ಪ್ರತಿ ಕಿಲೋಮೀಟರ್‌ಗೆ 18 ರೂಪಾಯಿವರೆಗೆ ನಿಗದಿ ಮಾಡಲಾಗಿದೆ. ಒಂದು ಟ್ರಿಪ್‌ನಲ್ಲಿ ಮೂರು ಜನ ಮಾತ್ರ ಪ್ರಯಾಣ ಮಾಡಬಹುದಾಗಿದೆ.
ಇನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ಒನ್ ಅಂಡ್ ಆಫ್ ಚಾರ್ಜ್ (ಸಾಮಾನ್ಯ ದರ+ಸಾಮಾನ್ಯ ದರದ ಅರ್ಧಪಟ್ಟು ಹೆಚ್ಚು) ಮಾಡಬಹುದಾಗಿದೆ. ಜೊತೆಗೆ ವೇಯ್ಟಿಂಗ್ ಚಾರ್ಜ್ (ಕಾಯುವಿಕೆ ದರ) ಮೊದಲ ಐದು ನಿಮಿಷ ಉಚಿತ ಇರಲಿದೆ. 5 ನಿಮಿಷಗಳ ನಂತರ ಪ್ರತಿ 15 ನಿಮಿಷ ಅಥವಾ ಅರ್ಧ ಭಾಗಕ್ಕೆ 10 ರೂ., ಲಗೇಜ್ ದರ ಮೊದಲ 20 ಕೆಜಿಗೆ ಉಚಿತ ಇರಲಿದೆ. 20 ಕೆಜಿ ಮೇಲ್ಪಟ್ಟ ತೂಕದ ಲಗೇಜ್‌ಗೆ 10 ರೂ. ಹೆಚ್ಚುವರಿ ದರ ನಿಗದಿ ಮಾಡಲಾಗಿದೆ. ಗರಿಷ್ಠ ಪ್ರಯಾಣಿಕರ ಲಗೇಜುಗಳು 50 ಕೆಜಿಗೆ 10 ರೂಪಾಯಿ ನಿಗದಿ ಮಾಡಲಾಗಿದೆ.

ನೋಡಿರಿ

