ನಮ್ಮ ಮೆಟ್ರೋದಲ್ಲೂ ಮದ್ಯದ ಬಾಟಲಿ ಸಾಗಾಟಕ್ಕೆ ಅನುಮತಿ? – ಅಧಿಕಾರಿಗಳು ಹೇಳಿದ್ದೇನು?

ನಮ್ಮ ಮೆಟ್ರೋದಲ್ಲೂ ಮದ್ಯದ ಬಾಟಲಿ ಸಾಗಾಟಕ್ಕೆ ಅನುಮತಿ? – ಅಧಿಕಾರಿಗಳು ಹೇಳಿದ್ದೇನು?

ಬೆಂಗಳೂರು: ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಾಗ ಮದ್ಯದ ಬಾಟಲಿಗಳನ್ನು ಕೊಂಡೊಯ್ಯಲು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಈ ಬೆನ್ನಲ್ಲೇ ನಮ್ಮ ಮೆಟ್ರೋ ರೈಲಿನಲ್ಲೂ ಮದ್ಯವನ್ನು ಸಾಗಿಸಲು ಬಿಎಂಆರ್‌ಸಿಎಲ್ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಶಿವನ ಅವತಾರದಲ್ಲಿ ಬಾಲಿವುಡ್‌ನ ಸ್ಟೈಲ್‌ಕಿಂಗ್ –  ಅಕ್ಷಯ್ ಕುಮಾರ್‌ಗೆ ಸಕ್ಸಸ್ ತಂದುಕೊಡುತ್ತಾ ‘ಓಎಂಜಿ 2’ ಸಿನಿಮಾ?

ಈ ಬಗ್ಗೆ ಬಿಎಂಆರ್‌ಸಿಎಲ್ ಎಂಡಿ ಅಂಜುಮ್ ಅವರು ಮಾಹಿತಿ ನೀಡಿದ್ದಾರೆ. ಮೆಟ್ರೋದಲ್ಲಿ ಪ್ರಯಾಣಿಸುವಾಗ ಮದ್ಯದ ಬಾಟಲಿಗಳನ್ನು ಸಾಗಿಸಲು ಪ್ರಯಾಣಿಕರಿಗೆ ಅವಕಾಶ ನೀಡುವ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ. ಮೆಟ್ರೋ ರೈಲಿನಲ್ಲಿ ಮದ್ಯವನ್ನು ಸಾಗಿಸಲು ಪ್ರಯಾಣಿಕರಿಗೆ ದೆಹಲಿ ಮೆಟ್ರೋ ಇತ್ತೀಚೆಗೆ ಅನುಮತಿ ನೀಡಿದೆ. ಆ ಕುರಿತು ಅಧ್ಯಯನ ಮಾಡಿದ ನಂತರ ಪ್ರಯಾಣಿಕರಿಗೆ ಮದ್ಯವನ್ನು ಸಾಗಿಸಲು ಅನುಮತಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಪ್ರಸ್ತುತ, ಪ್ರಯಾಣಿಕರು ಮೆಟ್ರೋ ನಿಲ್ದಾಣದ ಒಳಗೆ ಮದ್ಯದ ಬಾಟಲಿಗಳನ್ನು ಕೊಂಡೊಯ್ಯುವಂತಿಲ್ಲ. ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಲ್ಲಿ ಮದ್ಯ ಸೇವಿಸಿ ಇತರರಿಗೆ ತೊಂದರೆ ಉಂಟುಮಾಡುವ ಕಾರಣ ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ದೆಹಲಿ ಮೆಟ್ರೋ ಕೆಲವು ಷರತ್ತುಗಳೊಂದಿಗೆ ಮೆಟ್ರೋ ರೈಲಿನ ಒಳಗೆ ಎರಡು ಸೀಲ್ಡ್ ಮದ್ಯದ ಬಾಟಲಿಗಳನ್ನು ಸಾಗಿಸಲು ಪ್ರಯಾಣಿಕರಿಗೆ ಅನುಮತಿ ನೀಡಿದೆ. ನಾವು ಆ ಷರತ್ತುಗಳನ್ನು ಅಧ್ಯಯನ ಮಾಡುತ್ತೇವೆ ಮತ್ತು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮೆಟ್ರೋ ಒಳಗೆ ಮದ್ಯದ ಬಾಟಲಿಗಳನ್ನು ಸಾಗಿಸಲು ಬಿಎಂಆರ್​ಸಿಎಲ್ ಈ ಹಿಂದೆ ಪ್ರಯಾಣಿಕರಿಗೆ ಅನುಮತಿ ನೀಡಿತ್ತು. ಮೆಟ್ರೋ ನಿಲ್ದಾಣದ ರೆಸ್ಟ್ ರೂಂನಲ್ಲಿ ಪ್ರಯಾಣಿಕರೊಬ್ಬರು ಮದ್ಯ ಸೇವಿಸುತ್ತಿರುವುದು ಕಂಡುಬಂದ ನಂತರ 2019 ರಲ್ಲಿ ಬಿಎಂಆರ್​ಸಿಎಲ್ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತು. ಮೆಟ್ರೋ ನಿಲ್ದಾಣಗಳಲ್ಲಿ ಮದ್ಯವನ್ನು ನಿಷೇಧಿಸಲು ಮತ್ತೊಂದು ಕಾರಣವೆಂದರೆ, ಅದು ಶೀಘ್ರ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳ ವ್ಯಾಪ್ತಿಯಲ್ಲಿ ಬರುವುದು. ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕೂಡ ಮದ್ಯದ ಬಾಟಲಿಗಳನ್ನು ಸಾಗಿಸುವಂತಿಲ್ಲ

suddiyaana