ಮಧ್ಯಪ್ರದೇಶದ ರಾಜ್‌ಗಢದಲ್ಲಿ ಬಸ್ ಅಪಘಾತ – ಬೆಂಗಳೂರು ಕ್ರೈಂ ಪೊಲೀಸ್ ಇನ್‌ಸ್ಪೆಕ್ಟರ್ ಸಾ*ವು

ಮಧ್ಯಪ್ರದೇಶದ ರಾಜ್‌ಗಢದಲ್ಲಿ ಬಸ್ ಅಪಘಾತ – ಬೆಂಗಳೂರು ಕ್ರೈಂ ಪೊಲೀಸ್ ಇನ್‌ಸ್ಪೆಕ್ಟರ್ ಸಾ*ವು

 ಮಧ್ಯಪ್ರದೇಶದ ರಾಜ್‌ಗಢದಲ್ಲಿ ಬಸ್ ಸೇತುವೆಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯವಾಗಿದ್ದು, ಓರ್ವ ಪೊಲೀಸ್​​ ಸಿಬ್ಬಂದಿ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರ ಪ್ರಕಾರ ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಸುಮಾರು ನಾಲ್ವರು ಪ್ರಯಾಣಿಕರು ಹೊರಕ್ಕೆ ಎಸೆಯಲ್ಪಟ್ಟು, 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ.

ಇದನ್ನೂ ಓದಿ: ಪ್ರವಾಹದಲ್ಲಿ ಸ*ತ್ತವರ ಚಿನ್ನವನ್ನೂ ಬಿಡಲಿಲ್ಲ! – ನೇಪಾಳದಲ್ಲಿ ಮಾನವೀಯತೆಯನ್ನೇ ಮರೆತ ಜನ..!

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ಕಾನ್ಪುರದಿಂದ ಇಂದೋರ್‌ಗೆ ಪ್ರಯಾಣಿಸುತ್ತಿತ್ತು. ಬಿಯೋರಾ ಬಳಿಯ ಸೇತುವೆಯ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಈ ಭೀಕರ ಅಪಘಾತ ಸಂಭವಿಸಿದೆ. ಬಸ್‌ನಿಂದ ಬಿದ್ದ ಹಲವಾರು ಪ್ರಯಾಣಿಕರ ಶವಗಳು ಸೇತುವೆಯ ಕೆಳಗೆ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ.

 ಗಾಯಗೊಂಡ 11 ಪ್ರಯಾಣಿಕರನ್ನು ಮಧ್ಯಪ್ರದೇಶದ ಬಿಯೋರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಪ್ರಯಾಣಿಕರನ್ನು ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  ಘಟನೆ ಬಗ್ಗೆ ಮಾಹಿತಿ ನೀಡಿದ ರಾಜ್‌ಗಢ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಟೋಲಾನಿ, “ಪ್ರಾಥಮಿಕ ತನಿಖೆ ಪ್ರಕಾರ ಅತಿವೇಗವೇ ಘಟನೆಗೆ ಕಾರಣ ಎಂದು ತೋರುತ್ತದೆ. ಬಸ್ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದ ಸ್ಥಳದಲ್ಲಿ ತಿರುವು ಇದೆ. ಘಟನೆಯಲ್ಲಿ ಬೆಂಗಳೂರು ಸೈಬರ್ ಸೆಲ್‌ನಲ್ಲಿ ಸಬ್ – ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರೂ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ಇಲ್ಲಿಗೆ ಬಂದಿದ್ದರು. ರವಿ ಅವರ ತಂಡದ ಸಿಬ್ಬಂದಿಯಾದ ವಿಶ್ವನಾಥ್ ಮತ್ತು ರಮೇಶ್ ಎಂಬವರೂ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

Kishor KV

Leave a Reply

Your email address will not be published. Required fields are marked *