ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡಕ್ಕೆ ಓರ್ವ ಬಲಿ – ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡಕ್ಕೆ ಓರ್ವ ಬಲಿ – ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಶ್ರೀಕೃಷ್ಣ ಜನ್ಮಾಷ್ಟಮಿಯಂದೇ ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಕೆ.ಆರ್‌ ಮಾರ್ಕೆಟ್‌ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಚರ್ಮದ ಸಮಸ್ಯೆ ಕಾಡ್ತಿದ್ಯಾ? – ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್!‌

ಶನಿವಾರ ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ವಾಣಿಜ್ಯ ಕಟ್ಟಡದ 3ನೇ ಅಂತಸ್ಥಿನಲ್ಲಿದ್ದ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಕಟ್ಟಡ ಎಂದು ಹೇಳಲಾಗ್ತಿದೆ. ರಾಜಸ್ಥಾನ ಮೂಲದ ಮದನ್ ಸಿಂಗ್ ಮೃತಪಟ್ಟಿರುವ‌ ವ್ಯಕ್ತಿ.

ಇನ್ನೂ ದುರಂತ ನಡೆದ ಮಳಿಗೆಯಲ್ಲಿ ಒಂದೇ ಕುಟುಂಬದ ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಟ್ಟು ನಾಲ್ವರು ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಪತಿ, ಪತ್ನಿ ಹಾಗೂ 8 ಮತ್ತು 5 ವರ್ಷದ ಇಬ್ಬರು ಮಕ್ಕಳಿದ್ದರು. ಮದನ್‌ ಸಿಂಗ್‌ ಎಂಬಾತ ಸಾವನ್ನಪ್ಪಿದ್ದು, ಉಳಿದ ಮೂವರು ಸಾವನ್ನಪ್ಪಿರುವ ಶಂಕ್ಯೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದರೊಂದಿಗೆ ಸ್ಥಳದಲ್ಲಿ ಮೂರು ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ.

ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ಹಿನ್ನೆಲೆ ರಕ್ಷಣಾ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ ದುರಂತ ನಡೆದ ಮಳಿಗೆಯಲ್ಲಿ ತಾಯಿ-ಮಗು ಒಳಗೆ ಸಿಲುಕಿದ್ದಾರೆಂದು ಹೇಳಲಾಗುತ್ತಿದೆ. ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Shwetha M