ಬೆಂಗಳೂರಿನಲ್ಲಿ ದೇಶ 2ನೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅಡಿಗಲ್ಲು

ಕಳೆದ ವರ್ಷ ಆರ್‌ಸಿಬಿ ಐಪಿಎಲ್ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿಯಲ್ಲಿ ಭೀಕರ ದುರಂತ ನಡೆದಿತ್ತು. ಆ ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇಟ್ಟಿದ್ದೇ ದಿಟ್ಟ ಹೆಜ್ಜೆ.. ಅದುವೇ ಕರ್ನಾಟಕ ರಾಜ್ಯದಲ್ಲಿ ದೊಡ್ಡದಾದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡೋದು.. ಇವತ್ತು
ಬೆಂಗಳೂರಿನ ಹೊಸ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್, ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಿಎಂ ಕಾನೂನು ಸಲಹೆಗಾರ ಪೊನಣ್ಣ ಹಾಗೂ ಶಾಸಕ ಕೃಷ್ಣಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ‘ಬೆಳ್ಳಿ ಗದೆ’ಯನ್ನು ಉಡುಗೊರೆಯಾಗಿ ನೀಡಿ, ಅಭಿನಂದಿಸಿ ಗೌರವಿಸಿದರು.
ಇದನ್ನೂ ಓದಿ: ಬಾಲಿವುಡ್‌ಗೆ ಕಾಲಿಟ್ಟ ರಾಜ್ ಬಿ ಶೆಟ್ಟಿ – ಬಂದರ್ ಸಿನಿಮಾದಲ್ಲಿ ಬಾಬಿ ಡಿಯೋಲ್ ಜೊತೆ ಕನ್ನಡಿಗನ ಖದರ್
ಹೌದು. ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಇದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿದೆ.
KHBವತಿಯಿಂದ ಬರೋಬ್ಬರಿ 100 ಎಕರೆ ಜಾಗದಲ್ಲಿ, ಸುಮಾರು 900 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ . 80,000 ಆಸನಗಳ ಅತ್ಯಾಧುನಿಕ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಕೇವಲ 2 ರಿಂದ 3 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಏಕಕಾಲಕ್ಕೆ 500ಕ್ಕೂ ಹೆಚ್ಚು ವಾಹನಗಳನ್ನು ಪಾರ್ಕ್ ಮಾಡಬಹುದಾದ ಸುಸಜ್ಜಿತ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ ಇದೆ. ಕ್ರೀಡಾ ಪ್ರೇಮಿಗಳಿಗಾಗಿ ವಾಣಿಜ್ಯ ಮತ್ತು ಚಿಲ್ಲರೆ ವ್ಯಾಪಾರ ಮಳಿಗೆಗಳು, ಕ್ರೀಡಾ ಪರಿಕರಗಳ ಅಂಗಡಿ ಮತ್ತು ವಿಶಾಲವಾದ ಉಪಹಾರ ಗೃಹಗಳು ಇವೆ.

ನೋಡಿರಿ

