ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ನಾಲ್ಕು ದಿನ ಮೆಟ್ರೋ ಅವಧಿ ವಿಸ್ತರಣೆ!
ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಮಹತ್ವದ ಸುದ್ದಿಯೊಂದಿದೆ. ಬಿಎಂಆರ್‌ಸಿಎಲ್ ನಾಲ್ಕು ದಿನ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದೆ. ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ದಿನೇ ದಿನೆ ಹೆಚ್ಚಾಗುತ್ತಿದೆ ಬಿಸಿಲಿನ ತಾಪ – ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ!
ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಪೇಪರ್ ಟಿಕೆಟ್ ಸಿಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ.
QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.