ನಮ್ಮ ಮೆಟ್ರೋದ ಮಹಿಳಾ ಪ್ರಯಾಣಿಕರಿಗೆ ಗುಡ್‌ನ್ಯೂಸ್‌! – ಒಂದಲ್ಲ ಎರಡು ಬೋಗಿ ಮೀಸಲು!

ನಮ್ಮ ಮೆಟ್ರೋದ ಮಹಿಳಾ ಪ್ರಯಾಣಿಕರಿಗೆ ಗುಡ್‌ನ್ಯೂಸ್‌! – ಒಂದಲ್ಲ ಎರಡು ಬೋಗಿ ಮೀಸಲು!

ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವುದು, ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್​ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ.

ಹೌದು, ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಮಹಿಳೆಯ ಮೇಲೆ ಕಿರುಕುಳದ ಪ್ರಕರಣಗಳು ವರದಿಯಾಗುತ್ತಿದೆ. ಈ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ಎಚ್ಚೆತ್ತುಕೊಂಡಿದೆ. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಮಹಿಳೆಯರಿಗೆ 2 ಬೋಗಿ ಮೀಸಲಿಡಲು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ: ಮೂರು ಸಿಂಹ.. ಒಂದು ಮುಂಗುಸಿ ನಡುವೆ ಬಿಗ್‌ ಫೈಟ್! –‌ ದೊಡ್ಡ ಕಾಳಗದಲ್ಲಿ ಗೆದ್ದಿದ್ದು ಯಾರು ಗೊತ್ತಾ?

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ಯುವಕನೊಬ್ಬ ಹಿಂಬದಿಯಿಂದ ಖಾಸಗಿ ಅಂಗವನ್ನ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿಯೊಬ್ಬಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದಳು. ಅಲ್ಲದೆ, ವಿಚಾರ ತಿಳಿದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಹಿಡಿದಿದ್ದರು. ಈ ವೇಳೆ ಯುವತಿ ಮುಂದೆ ಆತ ತಪ್ಪೊಪ್ಪಿಕೊಂಡಿದ್ದನು.

ನವೆಂಬರ್ 20 ರಂದು ಇದೇ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ, ಕೆಂಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ಕೊಟ್ಟಿದ್ದರ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಡಿಸೆಂಬರ್ 7 ರಂದು ರಾಜಾಜಿನಗರಲ್ಲಿ ಮೆಟ್ರೋ ಹತ್ತಿದ್ದ ಯುವತಿಗೆ ಯುವಕನೊಬ್ಬ ಹಿಂಬದಿಯಿಂದ ಬಂದು ಆಕೆಯ ದೇಹವನ್ನ ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದ. ಈ ರೀತಿಯ ಪ್ರಕರಣ ನಡೆಯುತ್ತಿರುವುದರಿಂದ ಹೆಣ್ಣುಮಕ್ಕಳಿಗೆ ಮೆಟ್ರೋ ಎಷ್ಟು ಸುರಕ್ಷಿತ ಅನ್ನೋ ಆತಂಕಭರಿತ ಪ್ರಶ್ನೆ ಮೂಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್‌ ಕ್ರಮಕೈಗೊಂಡಿದೆ.

Shwetha M