ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಮೆಟ್ರೋ ರೈಲು – ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ
ಬೆಂಗಳೂರು: ಯಶವಂತಪುರ-ನಾಗಸಂದ್ರ ಮಾರ್ಗದ ಮೆಟ್ರೋದಲ್ಲಿ ತಾಂತ್ರಿಕದೋಷ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಇದನ್ನೂಓದಿ: ಸಂಸತ್‌ನಲ್ಲಿ ಭದ್ರತಾ ಲೋಪ ಪ್ರಕರಣ – ಮಾಸ್ಟರ್‌ಮೈಂಡ್ ಲಲಿತ್ ಝಾ ಅರೆಸ್ಟ್!
ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆಗೆ ಹಸಿರು ಮಾರ್ಗದ ರೈಲಿನಲ್ಲಿ ತಾಂತ್ರಿಕದೋಷ ಕಾಣಿಸಿಕೊಂಡಿದೆ. ಪೀಣ್ಯದಲ್ಲಿ ರೈಲು ಕೆಟ್ಟುನಿಂತಿದ್ದು, ಇದರಿಂದಾಗಿ ಯಶವಂತಪುರದಿಂದ ನಾಗಸಂದ್ರ ಹಾಗೂ ನಾಗಸಂದ್ರದಿಂದ ಯಶವಂತಪುರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಪ್ರಯಾಣಿಕರು ಮೆಟ್ರೋ ನಿಲ್ದಾಣಕ್ಕೆ ಬಂದು ವಾಪಸ್ ಹೋಗುತ್ತಿದ್ದಾರೆ.
ಟ್ರಾಫಿಕ್ ಕಿರಿಕಿರು ತಪ್ಪಿಸಲು ಹೆಚ್ಚಿನ ಜನರು ಅದರಲ್ಲೂ ಉದ್ಯೋಗಸ್ಥರು ಮೆಟ್ರೋದಲ್ಲಿ ಸಂಚಾರ ಮಾಡುತ್ತಿದ್ದಾರೆ. ಇದರಿಂದಾಗಿ ಸಮಯ ಕೂಡ ಉಳಿಯುತ್ತಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ಸಂಚಾರ ಸ್ಥಗಿತಗೊಂಡಿರುವುದರಿಂದ ಕೆಲಸಕ್ಕೆ ಹೋಗುವ ಜನರು ಬಸ್, ಆಟೋ ಹತ್ತುವಂತಾಗಿದೆ. ನಾಗಸಂದ್ರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ಗೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ.