ರಾಜಧಾನಿ ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆ ಕೊ*ಲೆ

ರಾಜಧಾನಿ ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆ ಕೊ*ಲೆ

ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  DJ ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಡೆದಿದೆ. ಯುವತಿ ಜೋಯಾಯಳ ಕತ್ತುಕೊಯ್ದು ಕೊಂದು ಶಬೀಲ್(20) ಪರಾರಿಯಾಗಿದ್ದು, ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಶಬೀಲ್ ಕುಟುಂಬ ಸದಸ್ಯರಿಂದಲೇ ಪ್ರಕರಣ ಬೆಳಕಿಗೆ ಬಂದಿದ್ದು, ಡಿ.ಜೆ.ಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಶಬೀಲ್​ಗಾಗಿ ಶೋಧ ಮುಂದುವರಿದಿದೆ. ಬಾಲಕಿ ಹತ್ಯೆಯಾಗಿರುವ ಬಗ್ಗೆ ಬೆಳಗ್ಗೆ 11 ಗಂಟೆಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ಇದನ್ನೂ ಓದಿ: ಐಪಿಎಲ್ ಆರಂಭಕ್ಕೂ ಮುನ್ನವೇ ಆರ್‌ಸಿಬಿಗೆ ಬಿಗ್ ಶಾಕ್ – ಆರಂಭಿಕ ಪಂದ್ಯ ಆಡಲ್ಲ ಜೋಶ್ ಹೇಝಲ್​ವುಡ್

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ, ಹತ್ಯೆಯಾದ ಸ್ಥಳದಲ್ಲಿ ಸೋಕೋ ಟೀಮ್ ಪರಿಶೀಲನೆ ನಡೆಸಿದೆ. ಕೊಲೆಮಾಡಿರುವುದು ಯಾರು ಎಂದು ಈಗಾಗಲೇ ಗೊತ್ತಾಗಿದ್ದು, ಆರೋಪಿ ಶಬೀಲ್ ಬಂಧಿಸಿದ ನಂತರ ಕೊಲೆಗೆ ಕಾರಣ ತಿಳಿಯಲಿದೆ. ಘಟನೆ ನಡೆದ ಸ್ಥಳ ಶಬೀಲ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಈ ಮನೆಯಲ್ಲಿ ಯಾರೂ ವಾಸ ಇರಲಿಲ್ಲ. ಆಗಾಗ ಇಬ್ಬರು ಇಲ್ಲಿ ಬಂದು ಸೇರುತ್ತಿದ್ದರೂ ಎಂಬ ಮಾಹಿತಿಯಿರೋದಾಗಿ ಅವರು ತಿಳಿಸಿದ್ದಾರೆ.

ಮದುವೆ ವಿಚಾರಕ್ಕೆ  ಅಣ್ಣನಿಂದ ತಮ್ಮನ ಕೊಲೆ

ಯುವತಿ ಜೊತೆ ಮದುವೆ ವಿಚಾರಕ್ಕೆ ತಮ್ಮನನ್ನೇ ಅಣ್ಣ ಕೊಲೆಗೈದಿರುವ ಆಘಾತಕಾರಿ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಫಕ್ಕೀರಪ್ಪ(19) ಬರ್ಬರ ಹತ್ಯೆ ಮಾಡಲಾಗಿದ್ದು, ಆರೋಪಿ ಅಶೋಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಕ್ಕಮೊಲಂಗಿ ನಿವಾಸಿಗಳಾಗಿದ್ದ ಸಹೋದರರು ಕುರಿ ಮೇಯಿಸಲು ಹಿರೇಕೊಪ್ಪ ಗ್ರಾಮಕ್ಕೆ ಬಂದಿದ್ದರು. ತಮ್ಮನಿಗೆ ಫಿಕ್ಸ್ ಆಗಿದ್ದ ಹುಡುಗಿ ಜತೆ ತಾನು ಮದುವೆ ಆಗಬೇಕೆಂದು ಬಯಸಿದ್ದ ಅಶೋಕ್‌, ಕುರಿದೊಡ್ಡಿಯಲ್ಲಿ ಮಲಗಿದ್ದ ಸಹೋದರನನ್ನು ಕೊಲೆಗೈದ್ದಾನೆ. ಬಳಿಕ ಬೇರೆಯವರು ಹತ್ಯೆ ಮಾಡಿರೋದು ಎಂದು ಕತೆ ಕಟ್ಟಿದ್ದ ಆರೋಪಿಯ ನಿಜ ಬಣ್ಣ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kishor KV

Leave a Reply

Your email address will not be published. Required fields are marked *