ಹನುಮಾನ್‌ ಚಾಲೀಸಾ ಕೇಸ್‌ – ಉದ್ವಿಗ್ನಗೊಂಡ ನಗರತ್ ಪೇಟೆ, ಹಲ್ಲೆಗೆ ಒಳಗಾದ ಅಂಗಡಿ ಮಾಲೀಕನನ್ನೇ ವಶಕ್ಕೆ ಪಡೆದ ಪೊಲೀಸರು!

ಹನುಮಾನ್‌ ಚಾಲೀಸಾ ಕೇಸ್‌ – ಉದ್ವಿಗ್ನಗೊಂಡ ನಗರತ್ ಪೇಟೆ, ಹಲ್ಲೆಗೆ ಒಳಗಾದ ಅಂಗಡಿ ಮಾಲೀಕನನ್ನೇ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ನಮಾಜ್‌ ವೇಳೆ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಗರತ್​ ಪೇಟೆಯ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು, ಹಿಂದೂ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದೆ ಶೋಭಾ ಕರಂದ್ಲಾಜೆ, ಹಲ್ಲೆಗೊಳಗಾದ ಅಂಗಡಿ ಮಾಲೀಕ ಸೇರಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 60% ಕನ್ನಡ ಫಲಕ ಇಲ್ಲವೆಂದು ಮಳಿಗೆ ಮುಚ್ಚಬೇಡಿ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಕಳೆದ ಎರಡು ದಿನಗಳ ಹಿಂದೆ ನಗರತ್ ಪೇಟೆಯ ಮುಖೇಶ್ ಎಂಬುವರ ಮೇಲೆ ಯುವಕರ ಗುಂಪು ಹಲ್ಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂದಿಸಿದಂತೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಅಂಗಡಿ ಮಾಲೀಕ ಮುಕೇಶ್‌ ಅವರು ಪ್ರತಿಭಟನಾ ರ್ಯಾಲಿಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಹೇಳಿ ಅಂಗಡಿ ಮಾಲೀಕ ಮುಖೇಶ್‌ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ.

ಈ ಸಂದರ್ಭದಲ್ಲಿ  ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶೋಭಾ ಕರಂದ್ಲಾಜೆ ಹಾಗೂ ಹಿಂದೂ ಕಾರ್ಯಕರ್ತರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Shwetha M