ಫೆ.11ರಂದು ಈ ಮಾರ್ಗದಲ್ಲಿ ಎರಡು ಗಂಟೆ ನಮ್ಮ ಮೆಟ್ರೋ ಸಂಚಾರ ಇರಲ್ಲ!

ಫೆ.11ರಂದು ಈ ಮಾರ್ಗದಲ್ಲಿ ಎರಡು ಗಂಟೆ ನಮ್ಮ ಮೆಟ್ರೋ ಸಂಚಾರ ಇರಲ್ಲ!

ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ಭಾನುವಾರ ಈ ರಸ್ತೆಯಲ್ಲಿ ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಭಾನುವಾರ ಅಂದರೆ (ಫೆಬ್ರವರಿ 11) ಎರಡೂ ಗಂಟೆ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ  ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸಖತ್‌ ಸೌಂಡ್‌ ಮಾಡುತ್ತಿದೆ ʼArticle 370ʼ ಟ್ರೇಲರ್‌! – ಸಿನಿಮಾದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಪಾತ್ರ?

ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ನಮ್ಮ ಮೆಟ್ರೋ ಬೆಳಗ್ಗೆ  7 ಗಂಟೆಯಿಂದ ಎಂದಿನಂತೆ ಸಂಚರಿಸುತ್ತವೆ. ಆದ್ರೆ, ಬೆಳಗ್ಗೆ 9 ಗಂಟೆಯ ನಂತರ ವೈಟ್‌ ಫೀಲ್ಡ್ (ಕಾಡುಗೋಡಿ) ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ.

ಇನ್ನು ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ ಎಂದು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Shwetha M