ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿ ಆತ್ಮ*ಹತ್ಯೆ – ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆ

ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿ ಆತ್ಮ*ಹತ್ಯೆ –  ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೃದಯ ಕಲಕುವ ಘಟನೆಯೊಂದು ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ಪತಿ ಮೃತಪಟ್ಟಿದ್ದಾರೆ ಎಂದು ತಿಳಿಯುತ್ತಲೇ ಪತ್ನಿ ಆತ್ಮಹತ್ಯೆಗೆ  ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ   ಮೃತರನ್ನು 48 ವರ್ಷದ ರಾಜು ಮತ್ತು 42 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿದು ಸಂಬಂಧಿಕರು ಕಂಬನಿ ಮಿಡಿದಿದ್ದಾರೆ.

ಫೆಬ್ರವರಿ 6ರಂದು ಗ್ಯಾಸ್‌ ಗೀಸರ್‌ ಲೀಕ್‌ ಆಗಿ ರಾಜು ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ಪುತ್ರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾರೆ. ಪತಿ ನಿಧನ ಹೊಂದಿರುವ ಸುದ್ದಿ ತಿಳಿಯುತ್ತಿದ್ದಂತೆ ಮನೆಯಲ್ಲಿಯೇ ಇದ್ದ ಮೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆ ಮೂಲಕ ದಂಪತಿ ಸಾವಿನಲ್ಲೂ ಜತೆಯಾಗಿದ್ದಾರೆ.

ಇದನ್ನೂ ಓದಿ: ಪುಸ್ತಕದ ಹಾಳೆ ಹರಿದಿದ್ದಕ್ಕೆ ಇದೆಂಥಾ ಶಿಕ್ಷೆ! – ಪ್ರಜ್ಞೆ ತಪ್ಪುವಂತೆ ವಿದ್ಯಾರ್ಥಿಗೆ ಥಳಿಸಿದ ನಾಲ್ವರು ಶಿಕ್ಷಕರು!

ʼʼಗ್ಯಾಸ್‌ ಗೀಸರ್‌ ಲೀಕ್‌ ಆಗಿ ರಾಜು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೀನಾ ಮನೆಯಲ್ಲಿಯೇ ಇದ್ದರು. ರಾಜು ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದತೆ ಮೀನಾ ಆಘಾತಕ್ಕೊಳಗಾಗಿದ್ದರು. ಕುಸಿದು ಕೂತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದುಕೊಂಡಿರಲಿಲ್ಲ. ಮೃತ ಪತಿಯ ಮುಖವನ್ನೂ ನೋಡದೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಬ್ಬರ ಮಧ್ಯೆ ಅಷ್ಟು ಆತ್ಮೀಯತೆ ಇತ್ತು. ಪತಿ ಇರದ ಒಂದು ಕ್ಷಣವನ್ನೂ ಅವರಿಗೆ ಊಹಿಸಲು ಸಾಧ್ಯವಿರಲಿಲ್ಲʼʼ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದಾರೆ. ಸದ್ಯ ದಂಪತಿಯ ಸಾವು ಮನೆಯವರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

Kishor KV

Leave a Reply

Your email address will not be published. Required fields are marked *