ಬೆಂಗಳೂರಿನ ಜನರಿಗೆ ನಾಳೆ ಮತ್ತು ನಾಡಿದ್ದು ಬಿಗ್ ಶಾಕ್ – ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್

ಬೆಂಗಳೂರಿನ ಜನರಿಗೆ ನಾಳೆ ಮತ್ತು ನಾಡಿದ್ದು ಬಿಗ್ ಶಾಕ್ ಎದುರಾಗಲಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ 66/11ಕೆ.ವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.6ರಂದು ಶುಕ್ರವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BESCOM ಮಾಹಿತಿ ನೀಡಿದೆ.
ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್ಮೆಂಟ್, 8ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್ಕ್ಲೇವ್, ಬೈರವೇಶ್ವರ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: ಸ್ವಚ್ಛತಾ ಕಾರ್ಮಿಕ ಮಹಿಳೆಗೆ ಚಿನ್ನದ ಸರ ಗಿಫ್ಟ್ ನೀಡಿದ ಸೂಪರ್ಸ್ಟಾರ್ ರಜನಿಕಾಂತ್!
ಅದೇ ರೀತಿ 66/11 ಕೆ.ವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.6ರಂದು ಶುಕ್ರವಾರ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ರಾಜಾಜಿನಗರ ವಿಭಾಗದ 66/11ಕೆ.ವಿ ವಿಜಯನಗರ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.7ರಂದು ಶನಿವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನೋಡಿರಿ

