ಬೆಂಗಳೂರಿಗರೇ ದಯವಿಟ್ಟು ಗಮನಿಸಿ – ಇವತ್ತು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್

ಕೆಪಿಟಿಸಿಎಲ್ ವತಿಯಿಂದ ಹೆಬ್ಬಾಳ ವಿಭಾಗದ 66/11 ಕೆವಿಎ ಸಹಕಾರ ನಗರ ಕೇಂದ್ರದ ಸಬ್‌ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BESCOM ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಸರ್ವೋದಯ ನಗರ 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.
ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್ ಆ್ಯಪ್ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.
ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021

ನೋಡಿರಿ

