16,600 ಕೋಟಿ ರೂಗೆ RCB ಸೇಲ್! – ಹೊಸ ಮಾಲೀಕರು ಯಾರು ಗೊತ್ತಾ?

ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, RCB ಮತ್ತು SRH ನಡುವೆ ಮ್ಯಾಚ್ ನಡೆಯಲಿದೆ. ಈ ಹೊತ್ತಲ್ಲೇ ಬೆಂಗಳೂರು ತಂಡ ಸೇಲ್ ಆಗಿದ. RCB ಫ್ರಾಂಚೈಸಿಯು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು 16,779 ಕೋಟಿ ರೂ.) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ.
ಇದನ್ನೂ ಓದಿ: PAN ಕಾರ್ಡ್ಗೆ ಅಪ್ಲೈ ಮಾಡಲು ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್! – ಏನೆಲ್ಲಾ ನಿಯಮ ಬದಲಾವಣೆಯಾಗಿದೆ?
ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಸಂಸ್ಥೆಯಿಂದ ಈ ಫ್ರಾಂಚೈಸಿಯನ್ನ ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ. ಆರ್‌ಸಿಬಿ ಫ್ರಾಂಚೈಸಿಯಿಂದ ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಆದಿತ್ಯ ಬಿರ್ಲಾ ಗ್ರೂಪ್‌ನ ನಿರ್ದೇಶಕ ಆರ್ಯಮನ್ ವಿಕ್ರಮ್ ಬಿರ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದು, ಟೈಮ್ಸ್ ಆಫ್ ಇಂಡಿಯಾ ಗ್ರೂಪ್‌ನ ಸತ್ಯನ್ ಗಜ್ವಾನಿ ಫ್ರಾಂಚೈಸಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. 2026ರ 19ನೇ ಆವೃತ್ತಿಯ ಐಪಿಎಲ್ ಬಳಿಕ ಈ ಹೊಸ ಮಾಲೀಕತ್ವವು ಅಧಿಕೃತವಾಗಿ ಜಾರಿಗೆ ಬರಲಿದೆ. ಅಲ್ಲಿಯವರೆಗೆ ಡಿಯಾಜಿಯೊ ಸಂಸ್ಥೆಯೇ ತಂಡದ ಜವಾಬ್ದಾರಿಯನ್ನ ನಿರ್ವಹಿಸಲಿದೆ.
2008 ರಲ್ಲಿ ವಿಜಯ್ ಮಲ್ಯ ಒಡೆತನದ ಯುನೈಟೆಡ್ ಸ್ಪೀರಿಟ್ಸ್ ಆರ್‌ಸಿಬಿ ತಂಡವನ್ನು 111.6 ಮಿಲಿಯನ್ ಡಾಲರ್(ಆಗಿನ 700-800 ಕೋಟಿ ರೂ.) ನೀಡಿ ಖರೀದಿಸಿತ್ತು. 2012ರಲ್ಲಿ ಕಿಂಗ್‌ಫಿಶರ್ ಏರ್‌ಲೈನ್ಸ್ ಕಾರ್ಯಾಚರಣೆ ನಿಲ್ಲಿಸಿತು. ಉದ್ಯಮದಲ್ಲಿ ನಷ್ಟವಾದ ಕಾರಣ ಮಲ್ಯ ಅವರ ಯುನೈಟೆಡ್ ಸ್ಪಿರಿಟ್ಸ್ ಕಂಪನಿಯನ್ನು ಡಿಯಾಜಿಯೊ ಸ್ವಾಧೀನಪಡಿಸಿಕೊಂಡಿತು. ಆರ್‌ಸಿಬಿಯಲ್ಲಿ ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಇದ್ದ ಕಾರಣ ಅದರ ಮಾಲೀಕತ್ವ ಡಿಯಾಜಿಯೊಗೆ ಹೋಗಿತ್ತು. ಆದ್ರೆ 18ನೇ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಯುನೈಟೆಡ್ ಸ್ಪಿರಿಟ್ಸ್ ಹೂಡಿಕೆದಾರರು ಆತಂಕ ಹೊರಹಾಕಿದ್ದರು. ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಯಿದೆ. ಕೊಹ್ಲಿ ನಿವೃತ್ತಿ ಹೇಳಿದರೆ ಆರ್‌ಸಿಬಿ ಮೌಲ್ಯ ಕುಸಿಯುವ ಸಾಧ್ಯತೆಯಿದೆ. ಈ ಕಾರಣಕ್ಕೆ ಆರ್‌ಸಿಬಿ ತಂಡವನ್ನ ಯುನೈಟೆಡ್ ಸ್ಪಿರಿಟ್ಸ್ ಮಾರಾಟ ಮಾಡಿದೆ ಎನ್ನಲಾಗ್ತಿದೆ.

ನೋಡಿರಿ

