ಬೆಂಗಳೂರಿನಲ್ಲಿ ನಾಲ್ಕು ವರ್ಷಗಳ ನಂತರ ಅತ್ಯಧಿಕ ಡೆಂಘೀ ಪ್ರಕರಣಗಳು ದಾಖಲು – ಬಿಬಿಎಂಪಿ ಅಧಿಕಾರಿಗಳ ಜೊತೆ ಆರೋಗ್ಯ ಸಚಿವರ ಮೀಟಿಂಗ್

ಬೆಂಗಳೂರಿನಲ್ಲಿ ನಾಲ್ಕು ವರ್ಷಗಳ ನಂತರ ಅತ್ಯಧಿಕ ಡೆಂಘೀ ಪ್ರಕರಣಗಳು ದಾಖಲು – ಬಿಬಿಎಂಪಿ ಅಧಿಕಾರಿಗಳ ಜೊತೆ ಆರೋಗ್ಯ ಸಚಿವರ ಮೀಟಿಂಗ್

ಬೆಂಗಳೂರಿನಲ್ಲಿ ಡೆಂಘೀ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅತ್ಯಧಿಕ ಡೆಂಘೀ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಡೆಂಘೀ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯದ ಬಗ್ಗೆಯೂ ಚರ್ಚಿಸಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯ ಆರೋಗ್ಯ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:  ವಿದ್ಯಾರ್ಥಿಗಳ ಮೇಲೆ ಹರಿದ ಖಾಸಗಿ ಬಸ್ – ನಾಲ್ಕು ವಿದ್ಯಾರ್ಥಿಗಳಿಗೆ ಗಂಭೀರ ಗಾಯ, ಬದುಕಿ ಬರಲಿಲ್ಲ ತುಳಸಿ..!

ಬಿಬಿಎಂಪಿ ಆರೋಗ್ಯ ವರದಿಯಲ್ಲಿ ಆಗಸ್ಟ್ ಒಂದೇ ತಿಂಗಳಲ್ಲಿ ಬರೊಬ್ಬರಿ 2,374 ಡೆಂಘೀ ಪ್ರಕರಣಗಳು ವರದಿ ಆಗಿವೆ. ಜನವರಿಯಿಂದ ಸೆಪ್ಟೆಂಬರ್ 7ರ ವರೆಗೆ 4926 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಮೂರು ವರ್ಷ ಹೋಲಿಕೆ ಮಾಡಿದ್ರೆ ಈ ಭಾರಿಯೇ ಅತ್ಯಧಿಕ ಡೆಂಘೀ ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯದಲ್ಲಿ ಡೆಂಘೀ ಪ್ರಕರಣ ಹೋಲಿಕೆ ಮಾಡಿದ್ರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಸಚಿವ ದಿನೇಶ್ ಗುಂಡೂರಾವ್ ಬಿಬಿಎಂಪಿ ವಲಯವಾರು ಡೆಂಘೀ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಹೆಚ್ಚು ಪ್ರಕರಣ ಪತ್ತೆಯಾದ ಕಡೆ ಹೆಚ್ಚಿನ ಕ್ರಮ ವಹಿಸಲು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

suddiyaana