ಸೇಫ್ ಸಿಟಿ ಯೋಜನೆಯ CCTV ಕ್ಯಾಮೆರಾಗಳಿಗೇ ಸೇಫ್ಟಿ ಇಲ್ಲ! –ಅತ್ಯಾಧುನಿಕ ಕ್ಯಾಮೆರಾಗಳೆಲ್ಲಾ ಏನಾಯ್ತು?

ಆಧುನಿಕ ತಂತ್ರಜ್ಞಾನಗಳ ಬಳಕೆಯ ಮೂಲಕ ಯುವತಿಯರು ಮತ್ತು ಮಹಿಳೆಯರ ಸುರಕ್ಷತೆಯ ಮೇಲೆ ನಿಗಾವಹಿಸಲು ಸೇಫ್ ಸಿಟಿ ಬೆಂಗಳೂರು ಯೋಜನೆ ಆರಂಭಿಸಲಾಗಿತ್ತು. ಈ ಯೋಜನೆಯ ಸಾವಿರಾರು ಸಿಸಿಟಿವಿ ಕ್ಯಾಮೆರಾಗಳನ್ನು ನರಗದಾದ್ಯಂತ ಅಳವಡಿಸಲಾಗಿತ್ತು. ಆದ್ರೀಗ ಶಾಕಿಂಗ್ ವಿಚಾರ ಬಯಲಾಗಿದೆ. ನಗರದಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ಕ್ಯಾಮೆರಾಗಳಿಗೆ ಸೇಫ್ ಇಲ್ಲ ಅನ್ನುವಂತಾಗಿದೆ.
ಇದನ್ನೂ ಓದಿ: ಭಾರತ-ಅಫ್ಘಾನಿಸ್ತಾನ ಟೆಸ್ಟ್ & ಏಕದಿನ ಸರಣಿಗೆ ತಂಡ ಪ್ರಕಟ – KL ಉಪನಾಯಕ.. ಪಡಿಕ್ಕಲ್ & ಪ್ರಸಿದ್ಧ್ ಗೂ ಚಾನ್ಸ್!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ನಗರದಾದ್ಯಂತ ಅಳವಡಿಸಲಾಗಿರುವ ಸೇಫ್ ಸಿಟಿ ಯೋಜನೆಯ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಲಾಗಿತ್ತು. ಆದ್ರೀಗ ಕ್ಯಾಮೆರಾಗಳನ್ನು ಸಂಪರ್ಕಿಸಲಾದ ಬ್ಯಾಟರಿಗಳನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಲ್ಯಾಂಗ್ಫೋರ್ಡ್ ರಸ್ತೆಯಲ್ಲಿದ್ದ ಸಿಸಿಟಿವಿ ಜಂಕ್ಷನ್ ಬಾಕ್ಸ್ಗಳೊಳಗಿನ ಎರಡು ಬ್ಯಾಟರಿಗಳನ್ನು ಕಳವು ಮಾಡಲಾಗಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಮಹಿಳೆಯರ ಸುರಕ್ಷತೆ ಮತ್ತು ನಗರದಲ್ಲಿ ನಿಗಾವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ‘ಸೇಫ್ ಸಿಟಿ’ ಯೋಜನೆಯಡಿ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕ್ಯಾಮೆರಾಗಳು ನಿರಂತರವಾಗಿ ಕಾರ್ಯನಿರ್ವಹಿಸಲು ಜಂಕ್ಷನ್ ಬಾಕ್ಸ್ಗಳಲ್ಲಿ ಬ್ಯಾಟರಿಗಳನ್ನು ಇರಿಸಲಾಗಿತ್ತು. ಪೊಲೀಸರ ಪ್ರಕಾರ, ಕಳ್ಳರು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿದ್ದ ಎರಡು ಜಂಕ್ಷನ್ ಬಾಕ್ಸ್ಗಳನ್ನು ಗುರಿಯಾಗಿಸಿಕೊಂಡು ಅವುಗಳೊಳಗಿನ ಬ್ಯಾಟರಿಗಳನ್ನು ಕದ್ದೊಯ್ದಿದ್ದಾರೆ. ಈ ಕುರಿತು ಸರ್ವೆಲೆನ್ಸ್ ವ್ಯವಸ್ಥೆಯ ನಿರ್ವಹಣೆಯ ಹೊಣೆ ಹೊತ್ತಿರುವ ಹನಿವೆಲ್ ಕಂಪನಿಯ ಯೋಜನಾ ನಿರ್ದೇಶಕ ರಾಜೀವ್ ನಾಯ್ಕರ್ ದೂರು ನೀಡಿದ್ದಾರೆ. ಕಳುವಾದ ಬ್ಯಾಟರಿಗಳ ಮೌಲ್ಯ ಸುಮಾರು 46,000 ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಗುರುತಿಸಿ ಬಂಧಿಸಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಏನಿದು ಸೇಫ್ ಸಿಟಿ ಪ್ರಾಜೆಕ್ಟ್?
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ವತಿಯಿಂದ ನಿರ್ಭಯಾ ನಿಧಿಯ ಅಡಿಯಲ್ಲಿ ಜಾರಿಗೆ ತರಲಾದ ಪ್ರಮುಖ ಮಹಿಳಾ ಸುರಕ್ಷತಾ ಯೋಜನೆಗಳ ಪೈಕಿ ಸೇಫ್ ಸಿಟಿ ಪ್ರಾಜೆಕ್ಟ್ ಕೂಡ ಒಂದು. ದೇಶದ ಪ್ರಮುಖ ಮಹಾನಗರಗಳಲ್ಲಿ ಅಪರಾಧಗಳನ್ನು ತಡೆಗಟ್ಟಲು ಮತ್ತು ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಈ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ವ್ವವಸ್ಥೆಯನ್ನು ಅಳವಡಿಸಲಾಗುತ್ತದೆ. ಯೋಜನೆಯಡಿ ಬೆಂಗಳೂರು ನಗರಾದ್ಯಂತ ಕೃತಕ ಬುದ್ಧಿಮತ್ತೆ ಆಧಾರಿತ ಸಾವಿರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ನೋಡಿರಿ

