ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಗೆ ಕೌಂಟ್ ಡೌನ್
ಚುನಾವಣಾ ಆಯೋಗದಿಂದ ಇಂದು ಬೆಳಗ್ಗೆ 11. 30 ಕ್ಕೆ ಸುದ್ದಿಗೋಷ್ಟಿ
ನವದೆಹಲಿ: ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕ ನಿಗದಿಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಚುನಾವಣಾ ಆಯೋಗ ಬುಧವಾರ ಬೆಳಗ್ಗೆ 11. 30 ಕ್ಕೆ ಸುದ್ದಿಗೋಷ್ಟಿ ನಡೆಸಲಿದೆ.
ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ದೆಹಲಿಯ ವಿಜ್ಞಾನ ಭವನದ ಕಚೇರಿಯಲ್ಲಿ ಬೆಳಗ್ಗೆ 11:30 ಕ್ಕೆ ಸುದ್ದಿಗೋಷ್ಟಿ ನಡೆಸಿ ರಾಜ್ಯ ವಿಧಾನ ಸಭಾ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಿದ್ದಾರೆ. ಈ ವೇಳೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ದಿನದ ಜೊತೆಗೆ ನೀತಿ ಸಂಹಿತೆ ವಿಚಾರಗಳ ಬಗ್ಗೆ ರಾಜೀವ್ ಕುಮಾರ್ ಮಾಹಿತಿ ನೀಡಲಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ರೆಡಿ – ಯಾವ ಕ್ಷೇತ್ರದಲ್ಲಿ ಯಾರ ಸ್ಪರ್ಧೆ..?
ಕಳೆದ ವಾರವೇ ರಾಜ್ಯ ಚುನಾವಣಾ ಆಯೋಗದ ಜಂಟಿ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು, ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಆಗಬಹುದು. ಅಗತ್ಯ ಚುನಾವಣಾ ಸಿದ್ಧತೆಯನ್ನು ಕೈಗೊಳ್ಳಿ ಎಂದು ಸೂಚಿಸಿದ್ದರು. ಅದರ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ರಾಜಕೀಯ ನಾಯಕರ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿದ್ದಾರೆ. ಜಿಲ್ಲಾ ಗಡಿಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿದ್ದಾರೆ.