ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ – ಬಾಲಕ ಸಾವು, ಹಲವರಿಗೆ ಗಾಯ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳ್ಳಗ್ಗೆ ದೊಡ್ಡ ಅವಘಡ ನಡೆದಿದೆ. ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡಿದ್ದು. ಬಾಲ ಮೃತಪಟ್ಟಿದ್ದಾನೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಧ್ವಜಾರೋಹಣ – ಗಮನ ಸೆಳೆದ ‘ಆಪರೇಷನ್ ಸಿಂಧೂರ’ ಬ್ಯಾನರ್
ಈ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ವಸ್ತು ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮುಬಾರಕ್(8) ಮೃತ ಬಾಲಕ. ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಜನರಿಗೆ ಗಾಯಗಳಾಗಿದ್ದು, ಸಂಜಯ್ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ನಗರದ ಸಾಕಷ್ಟು ಜನರು ಬೆಳಗ್ಗೆಯೇ ಲಾಲ್ ಬಾಗ್ನಲ್ಲಿ ಕೆಲಸಕ್ಕೆ ಹೋಗುತ್ತಾರೆ. ಒಂದು ವೇಳೆ ಇಂದು ಕೆಲಸಕ್ಕೆ ಹೋಗದೆ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಸಿಲಿಂಡರ್ ಬ್ಲಾಸ್ಟ್ ಆಗಿರುವ ಸಾಧ್ಯತೆ ಕಡಿಮೆ ಅಂತ ಸ್ಥಳಿಯರು ಹೇಳುತ್ತಿದ್ದು, ತುಂಬಾ ದೊಡ್ಡ ಬ್ಲಾಸ್ಟ್ ಆಗಿದೆ. ಕೆಲವರ ಕೈ ಮತ್ತು ತಲೆ ಹೋಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಫೋಟಗೊಂಡಿರುವ ಮನೆ ಸುತ್ತ ಮುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ನೋಡಿರಿ

