ಬಾಲಕನಿಗೆ ಮನಬಂದಂತೆ ಥಳಿಸಿದ ಶಿಕ್ಷಕಿ! – ಮನೆಯಲ್ಲಿ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ ಎಂದು ಧಮ್ಕಿ!

ಸ್ಕ್ಲೂಲ್ ಅಂದ್ಮೇಲೆ ಅಲ್ಲಿ ಎಲ್ಲಾ ವಿಭಿನ್ನ ವ್ಯಕ್ತಿತ್ವದ ಮಕ್ಕಳಿರುತ್ತಾರೆ. ಕೆಲವರು ಚೆನ್ನಾಗಿ ಪಾಠ ಕೇಳ್ತಾ, ಕೊಟ್ಟ ಹೋಂವರ್ಕ್‌ನ ಕಂಪ್ಲೀಟ್ ಮಾಡ್ತಾರೆ. ಇನ್ನೂ ಕೆಲ ಮಕ್ಕಳಿಗೆ ಓದಿನ ಮೇಲೆ ಆಸಕ್ತಿ ಇರೋದಿಲ್ಲ. ಹೋಂವರ್ಕ್ ಕೂಡ ಸರಿಯಾಗಿ ಮಾಡಲ್ಲ. ಈ ವೇಳೆ ಮಕ್ಕಳಿಗೆ ಶಿಕ್ಷಕರು ಶಿಕ್ಷೆ ನೀಡೋದು ಕಾಮನ್. ಆದ್ರೀಗ ಇಲ್ಲೊಬ್ಬಳು ಶಿಕ್ಷಕಿ 4ನೇ ಕ್ಲಾಸ್ ಬಾಲಕ ಹೋಂವರ್ಕ್ ಮಾಡಿಲ್ಲ ಕಾರಣಕ್ಕೆ ಕ್ರೂರವಾಗಿ ಹಲ್ಲೆ ನಡೆಸಿದ್ದಾಳೆ. ಇದೀಗ ಆಕೆ ಮೇಲೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಶ್ರೀಮಂತರೇ ಈಕೆಯ ಟಾರ್ಗೆಟ್! – ದುಡ್ಡಿಗಾಗಿ ಪ್ರೀತಿ, ಮದುವೆ.. ಮೂವರು ಗಂಡಂದಿರಿಗೆ ಲಕ್ಷ ಲಕ್ಷ ಪಂಗನಾಮ!
4ನೇ ತರಗತಿ ಬಾಲಕ ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಆತನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ಆಂಗ್ಲಿನ್ ಬಾಲಕನಿಗೆ ಬಾಸುಂಡೆ ಬರುವ ಮಟ್ಟಿಗೆ ಥಳಿಸಿದ್ದಾರೆ. ಇದೀಗ ಬಾಲಕನ ಪೋಷಕರು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಶಿಕ್ಷಕಿ ವಿರುದ್ಧ ದೂರು ನೀಡಿದ್ದಾರೆ.
ಘಟನೆಯ ವಿವರ!
ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ತಮ್ಮ ಮಗನನ್ನು ಹಾಸ್ಟೆಲ್‌ನಲ್ಲಿ ಬಿಟ್ಟು ಓದಿಸುತ್ತಿದ್ದರು. ಇತ್ತೀಚೆಗೆ ಮಗನನ್ನು ನೋಡಲು ಬಂದ ವೇಳೆ, ಆತನ ಕೈ ಮತ್ತು ದೇಹದ ಮೇಲೆ ಬಾಸುಂಡೆ ಗುರುತುಗಳನ್ನು ಕಂಡು ಶಾಕ್ ಆಗಿದ್ದರು. ಈ ವೇಳೆ ತಾಯಿಯನ್ನು ಕಂಡ ಮಗು ಅಳುತ್ತಾ ಹೋಂ ವರ್ಕ್ ಮಾಡದ ಕಾರಣ ಶಿಕ್ಷಕಿ ಆಂಗ್ಲಿನ್ ತನಗೆ ಥಳಿಸಿರುವುದಾಗಿ ಹೇಳಿದ್ದಾನೆ. ಹಲ್ಲೆ ವಿಚಾರವನ್ನು ಪೋಷಕರಿಗೆ ತಿಳಿಸಿದರೆ ಕುತ್ತಿಗೆ ಹಿಸುಕುವುದಾಗಿ ಬೆದರಿಕೆಯೂ ಹಾಕಿದ್ದರಿಂದ ತಾಯಿಯ ಬಳಿ ಏನೂ ಹೇಳಿಕೊಂಡಿಲ್ಲವೆಂದೂ ಬಾಲಕ ಕಣ್ಣೀರಿಟ್ಟಿದ್ದಾರೆ. ವಿಷಯ ತಿಳಿದ ಲಕ್ಷ್ಮೀ ಈ ಬಗ್ಗೆ ಶಾಲಾ ಮುಖ್ಯಸ್ಥರನ್ನು ಪ್ರಶ್ನಿಸಿದ್ದಾರೆ. ಪೊಲೀಸರನ್ನು ಕರೆಸಿ ಬಾಲಕನ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ಹೇಳಿದ್ದರು. ಈ ಮಧ್ಯೆ ಬಾಲಕ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದ. ನಂತರ ಶಿಕ್ಷಕಿ ಸಸ್ಪೆಂಡ್ ಆಗಿರಬಹುದೆಂದು ಮಗನನ್ನು ಶಾಲೆಗೆ ಕಳುಹಿಸಲು ಹೋದಾಗ ಆಕೆಯನ್ನು ಅಮಾನತುಗೊಳಿಸಿಲ್ಲವೆಂದು ತಿಳಿದು ಮತ್ತೆ ಶಾಲೆಯ ಆಡಳಿತಕ್ಕೆ ಪ್ರಶ್ನಿಸಿದಾಗಲೂ ಅವರು ನಿರ್ಲಕ್ಷ್ಯ ತೋರಿದ್ದಾರೆ. ಇದ್ರಿಂದ ಆಕ್ರೋಶಗೊಂಡ ತಾಯಿ ಗುರುವಾರ ದೂರು ದಾಖಲಿಸಿದ್ದಾರೆ.
ಬಾಲಕನ ತಾಯಿ ಹೇಳಿದ್ದೇನು?
ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕನ ತಾಯಿ ಲಕ್ಷ್ಮೀ, ಇತ್ತೀಚೆಗೆ ಮಗನನ್ನು ನೋಡಲು ಬಂದಾಗ ಆತನ ಕೈ ಮತ್ತು ದೇಹದ ಮೇಲೆ ಬಾಸುಂಡೆ ಗುರುತು ಕಂಡೆ. ವಿಚಾರಿಸಿದಾಗ ಕಳೆದ ಎರಡು ತಿಂಗಳಿಂದ ಇಂಗ್ಲಿಷ್ ಶಿಕ್ಷಕಿ ಆಂಗ್ಲಿನ್ ಮಗುವಿಗೆ ಹೊಡೆದು, ಪೋಷಕರಿಗೆ ಹೇಳಿದರೆ ಕುತ್ತಿಗೆ ಹಿಸುಕುವುದಾಗಿ ಬೆದರಿಸಿದ್ದಾಳೆ. ಎಫ್‌ಐಆರ್ ದಾಖಲಾಗಿದ್ದರೂ ಶಿಕ್ಷಕಿಯ ವಿರುದ್ಧ ತಕ್ಷಣ ಕ್ರಮ ಕೈಗೊಂಡಿಲ್ಲ ಎಂದು ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಲಕ್ಷ್ಮೀ BEOಗೆ ದೂರು ನೀಡಲು ಮುಂದಾಗಿದ್ದಾರೆ.

ನೋಡಿರಿ

