ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ! –  ಕರಾವಳಿ  ಸೇರಿದಂತೆ 17 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌!

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ! –  ಕರಾವಳಿ  ಸೇರಿದಂತೆ 17 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌!

ರಾಜ್ಯದಲ್ಲಿ ಹವಾಮಾನ ಬದಲಾವಣೆಯಾಗುತ್ತಿದೆ. ಬೆಳಗ್ಗೆ ಚಳಿ ಇದ್ರೆ, ಮಧ್ಯಾಹ್ನ ಸುಡು ಬಿಸಿಲು, ಸಂಜೆ ಮಳೆ ಸುರಿಯುತ್ತಿದೆ. ಇದೀಗ ಮತ್ತೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ಕರಾವಳಿ ಸೇರಿದಂತೆ 17 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಅಮೆರಿಕ – ಇರಾನ್‌ ನಡುವಿನ ಯುದ್ಧಕ್ಕೆ ಬಿಗ್‌ ಟ್ವಿಸ್ಟ್!‌ – ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ?

ರಾಜ್ಯದಲ್ಲಿ ನಿನ್ನೆ ಒಣಹವೆಯಿಂದ ಕೂಡಿತ್ತು. ಇಂದು ಕೂಡ ಮೋಡ ಕವಿದ ವಾತಾವರಣವಿದೆ. ಇದೀಗ  ಕರಾವಳಿಯೂ ಸೇರಿದಂತೆ ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಇನ್ನು ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ/ಸೆ ವೆಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ವರುಣಾರ್ಭಟವಿರಲಿದ್ದು, ಉಳಿದೆಡೆ ಒಣ ಹವೆ ಇರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

Shwetha M