ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಕಿರಿಕಿರಿ – ಬೆಂಗಳೂರಿನಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನೇ ದಿನೆ ಹೆಚ್ಚಾಗ್ತಾನೆ ಇದೆ. ಪೀಕ್ ಹವರ್ನಲ್ಲಿ ಗಂಟೆಗಟ್ಟಲೆ ರಸ್ತೆಯಲ್ಲೇ ಸಮಯ ಕಳೆಯುವಂತಾಗಿದೆ. ಇದೀಗ ಟ್ರಾಫಿಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಟ್ರಾಫಿಕ್ ಪೊಲೀಸರು ಹೊಸ ಪ್ಲ್ಯಾನ್ ಮಾಡಿದ್ದಾರೆ. ಇದೀಗ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಮಾಡಿದ್ದಾರೆ.
ಇದನ್ನೂ ಓದಿ: KSRTC ಬಸ್ನಲ್ಲಿ ಹೊಸ ರೂಲ್ಸ್! – ಇನ್ಮುಂದೆ ಲಗೇಜ್ಗೂ ದುಡ್ಡು ಕಟ್ಟಬೇಕಾ?
ಬೆಂಗಳೂರಿನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಟ್ರಾಫಿಕ್ ಪೊಲೀಸರು ಒಂದಲ್ಲ ಒಂದು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದೀಗ ಬೆಂಗಳೂರಿನ ಕೆಲ ರಸ್ತೆಗಳಲ್ಲಿ ಹಲವು ಕ್ರಮ ಕೈಗೊಂಡಿದ್ದಾರೆ. ಇದೀಗ, ಕಾರ್ತಿಕ್ ನಗರ ಜಂಕ್ಷನ್ನಿಂದ ಕಲಾಮಂದಿರವರೆಗೆ ಹೊರವರ್ತುಲ ರಸ್ತೆಯಲ್ಲಿನ ಮತ್ತು ವರ್ತೂರು ಕೋಡಿಯಿಂದ ಮಾರತ್ತಹಳ್ಳಿ ಕಡೆಗೆ ಮತ್ತು ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಕಡೆಗೆ ತೆರಳುವ ರಸ್ತೆಯಲ್ಲಿನ ಟ್ರಾಫಿಕ್ ಕಡಿಮೆ ಮಾಡಲು ಪೊಲೀಸರು ಹೊಸ ಕ್ರಮ ಕೈಗೊಂಡಿದ್ದಾರೆ. ಇದೀಗ ಟ್ರಾಫಿಕ್ ಪೊಲೀಸರು ಜೀವಿಕ ಆಸ್ಪತ್ರೆ ಮಾರತ್ತಹಳ್ಳಿ ಕಡೆಯ ಸರ್ವಿಸ್ ರಸ್ತೆಯಲ್ಲಿ ಕಲಾಮಂದಿರ ಕಡೆಯಿಂದ ಹೊರವರ್ತುಲ ರಸ್ತೆಗೆ ಪ್ರವೇಶಿಸುವ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಯಮಹಾ ಶೋ ರೂಂ ಬಳಿ ಹೊರವರ್ತುಲ ರಸ್ತೆಯಿಂದ ಸರ್ವಿಸ್ ರಸ್ತೆಗೆ ಪ್ರವೇಶಿಸುವ ಮಾರ್ಗವನ್ನು ನಿರ್ಬಂಧಿಸಲಾಗಿದೆ.
ಇನ್ನು ಚಿನ್ನಪ್ಪನಹಳ್ಳಿ ರೈಲ್ವೆ ಗೇಟ್ ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು ಜೀವಿಕಾ ಆಸ್ಪತ್ರೆಯ ಸರ್ವೀಸ್ ರಸ್ತೆಯ ಮೂಲಕ ಸಂಚರಿಸಿ ಕಡ್ಡಾಯವಾಗಿ ಯಮಹಾ ಶೋ ರೂಂ ಬಳಿ ಹೊರವರ್ತುಲ ರಸ್ತೆಗೆ ಪ್ರವೇಶಿಸಿ ಸಂಚರಿಸಬೇಕು. ಮಹದೇವಪುರ ಮತ್ತು ಕಾರ್ತಿಕನಗರ ಹೊರವರ್ತುಲ ರಸ್ತೆ ಕಡೆಯಿಂದ ವೈಟ್ಫೀಲ್ಡ್ / ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಕಲಾಮಂದಿರ ಜಂಕ್ಷನ್ನಲ್ಲಿ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ. ಕುಂದಲಹಳ್ಳಿ / ವರ್ತೂರು ಕಡೆಗೆ ಸಂಚರಿಸಬಹುದಾಗಿದೆ.
ವರ್ತೂರು ಕೋಡಿಯಿಂದ ಮಾರತ್ತಹಳ್ಳಿ ಕಡೆಗೆ ಮತ್ತು ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಕಡೆಗೆ ತೆರಳುವ ರಸ್ತೆಯಲ್ಲಿನ ಟ್ರಾಫಿಕ್ ಕಡಿಮೆ ಮಾಡಲು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ ಈ ಕೆಳಕಂಡಂತೆ ಪ್ರಾಯೋಗಿಕವಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ. ವಿಬ್ಗಯಾರ್ “ಯು” ಟರ್ನ್ ಅನ್ನು ನಿರ್ಬಂಧಿಸಲಾಗಿದೆ. ಮಾರತಹಳ್ಳಿ ಮತ್ತು ಕುಂದಲಹಳ್ಳಿಯಿಂದ ವಿಬ್ಗಯಾರ್ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತೂಬರಹಳ್ಳಿ ಬಳಿ “ಯು” ಟರ್ನ್ ಪಡೆದು ಸಂಚರಿಸಬಹುದಾಗಿದೆ.

ನೋಡಿರಿ

