ಗೀತಂ ಯೂನಿವರ್ಸಿಟಿ ಆವರಣದಲ್ಲಿ ದುರಂತ.. ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು!

ಗೀತಂ ಯೂನಿವರ್ಸಿಟಿ ಆವರಣದಲ್ಲಿ ದುರಂತ.. ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು!

ಆಂಧ್ರಪ್ರದೇಶದ ಗೀತಂ ಯೂನಿವರ್ಸಿಟಿ ಆವರಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಹುಮಹಡಿ ಕಟ್ಟಡದಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.  ಯುವತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗುತ್ತಿದ್ದು, ತನ್ನ ತಂದೆ ತಾಯಿಗೆ ಮೆಸೇಜ್​ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತಳ ಹೆಸರು ವರ್ಷಿತಾ. ಅವರು 20 ವರ್ಷ ವಯಸ್ಸಿನವರು. ಆಂಧ್ರಪ್ರದೇಶದ ಗುಂತಕಲ್ ಮೂಲದವರು. ಹೈದರಾಬಾದ್ ಮೂಲದಿಂದ ಬಂದು ಗೀತಂ ವಿವಿಯಲ್ಲಿ ಮೂರನೇ ವರ್ಷದ ಬಿಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಅವರು ನೆನ್ನೆ ರಾತ್ರಿ 6ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಕೊನೆಯ ಕ್ಷಣದಲ್ಲಿ ವರ್ಷಿತಾ ತಮ್ಮ ತಾಯಿ ಮತ್ತು ತಂದೆಗೆ ಸಂದೇಶ ಕಳುಹಿಸಿದ್ದರು ಎಂಬುದು ಬಯಲಾಗಿದೆ.
ಸಾವಿಗೂ ಮುನ್ನ ವರ್ಷಿತಾ ತನ್ನ ತಂದೆ ತಾಯಿಗೆ, “I Love you Dad. I love you mom” ಎಂದು ಮೆಸೇಜ್ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂದೇಶವು ಕುಟುಂಬದವರನ್ನು ದುಃಖದಲ್ಲಿ ಮುಳುಗಿಸಿದೆ.
ಕಳೆದ ಕೆಲವು ದಿನಗಳಿಂದ ವರ್ಷಿತಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬ ಶಂಕೆ ಇದೆ. ಅವರು ಈ ಸಮಸ್ಯೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಎರಡು ದಿನಗಳಿಂದ ಊಟ ಬಿಟ್ಟಿದ್ದರು ಎಂದು ಹೇಳಲಾಗುತ್ತಿದೆ. ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ನಿಖರ ಕಾರಣವನ್ನು ತನಿಖೆ ನಡೆಸಿ ತಿಳಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

 

Kishor KV

Leave a Reply

Your email address will not be published. Required fields are marked *