ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ ಎಫ್‌ಐಆರ್! –  ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ದೂರು

ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ ಎಫ್‌ಐಆರ್! –  ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ದೂರು

ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ್ದಾರೆಂಬ ಹಿನ್ನೆಲೆ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಲಕ್ಷ್ಮಿ ಮಂಚು ಮತ್ತು ಪ್ರಕಾಶ್ ರಾಜ್ ಸೇರಿದಂತೆ ಸುಮಾರು 25 ಸೆಲೆಬ್ರಿಟಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಹೈದರಾಬಾದ್ ಪೊಲೀಸರು ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಸಂತ್ರಸ್ತೆಯ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ

ಸೆಲೆಬ್ರಿಟಿಗಳು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ತೆಲುಗು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಿಸಿದ್ದರು. ದೂರಿನಲ್ಲಿ , ಸೆಲೆಬ್ರಿಟಿಗಳು ಬೆಟ್ಟಿಂಗ್ ಅನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ದೂರುದಾರರು ಹೆಸರಿಸಿರುವ ಸೆಲೆಬ್ರಿಟಿಗಳಲ್ಲಿ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಮತ್ತು ಲಕ್ಷ್ಮಿ ಮಂಚು, ನಟಿಯರಾದ ಪ್ರಣೀತಾ ಮತ್ತು ನಿಧಿ ಅಗರ್ವಾಲ್ ಸೇರಿದ್ದಾರೆ. ಅವರಲ್ಲದೆ, ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್‌ಗಳಾದ ಅನನ್ಯ, ಶ್ರೀಮುಖಿ, ಶ್ರೀ ಹನುಮಂತು, ಶ್ಯಾಮಲಾ, ವರ್ಷಿಣಿ, ಶೋಭಾ, ನೇಹಾ, ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಸನ್ನಿ ಯಾದವ್, ಟೇಸ್ಟಿ, ತೇಜ ಮತ್ತು ರಿತು ಅವರ ಹೆಸರುಗಳನ್ನು ಸಹ ಈ ದೂರಿನಲ್ಲಿ ಸೇರಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 318 (4), 112 ಮತ್ತು 49 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಲ್ಲದೆ, ಆರೋಪಿಗಳ ಮೇಲೆ ತೆಲಂಗಾಣ ರಾಜ್ಯ ಗೇಮಿಂಗ್ ಕಾಯ್ದೆ (TSGA) ಸೆಕ್ಷನ್ 4 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66-D ಯನ್ನು ಸಹ ವಿಧಿಸಲಾಗಿದೆ. ಇನ್ನು ಈ ತೆಲುಗು ತಾರೆಯರು Junglee Rummy ಆ್ಯಪ್ ಪ್ರಚಾರದ ವಿಷಯದಲ್ಲಿ ರಾಣಾ ದಗ್ಗುಬಾಟಿ ಮತ್ತು ಪ್ರಕಾಶ್ ರಾಜ್ ಹೆಸರುಗಳು ಕೇಳಿಬಂದಿವೆ ಎಂದು ಹೇಳಲಾಗುತ್ತಿದೆ. ಅದೇ ಸಮಯದಲ್ಲಿ, ವಿಜಯ್ ದೇವರಕೊಂಡ ಅವರು A23 ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Shwetha M