ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಸಮಾರಂಭ – ಮುದ್ದಿನ ಮಗಳಿಗೆ ಅಜ್ಜಿಯ ಹೆಸರಿಟ್ಟ ನಟಿ!

ನಟಿ ಭಾವನಾ ರಾಮಣ್ಣ ಅವರು ಐವಿಎಫ್ ಮೂಲಕ ಮಗು ಮಾಡಿಕೊಂಡಿದ್ದರು. ಇದೀಗ ಭಾವನಾ ತಮ್ಮ ಮುದ್ದಿನ ಮಗಳ ನಾಮಕರಣ ಸಮಾರಂಭವನ್ನು ಅದ್ದೂರಿಯಾಗಿ ನೆರವೇರಿಸಿದ್ದಾರೆ. ಮಗುವಿಗೆ ಅಜ್ಜಿಯ ಹೆಸರನ್ನು ಇಟ್ಟಿದ್ದಾರೆ.
ಇದನ್ನೂ ಓದಿ: RCB ಫ್ಯಾನ್ಸ್‌ಗೆ ಗುಡ್‌ನ್ಯೂಸ್! – ಟಿಕೆಟ್ ಮಾರಾಟಕ್ಕೆ ಡೇಟ್ ಅನೌನ್ಸ್!
ನಟಿ ಭಾವನಾ ರಾಮಣ್ಣ ಐವಿಎಫ್ ಮೂಲಕ ಗರ್ಭಿಣಿಯಾಗಿದ್ದರು. ಕಳೆದ ಆಗಸ್ಟ್ ನಲ್ಲಿ ಭಾವನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮಗಳಿಗೆ ನಾಮಕರಣ ಶಾಸ್ತ್ರವನ್ನು ಮಾಡಿದ್ದು, ಅದರ ಕೆಲವೊಂದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಆಪ್ತರ ಸಮ್ಮುಖದಲ್ಲಿ ನಾಮಕರಣ ಶಾಸ್ತ್ರ ನಡೆಯಿತು. ಮಗಳಿಗೆ ತಮ್ಮ ಅಜ್ಜಿಯ ಹೆಸರು ರುಕ್ಮಿಣಿ ಎಂದು ನಾಮಕರಣ ಮಾಡಿದ್ದಾರೆ.
ನಟಿ ಭಾವನಾ ಗರ್ಭಿಣಿಯಾಗಿ 7 ತಿಂಗಳ ಪೂರ್ಣಗೊಳಿಸುತ್ತಿದ್ದಂತೆಯೇ ಒಂದು ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ 8 ತಿಂಗಳಿಗೆ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಒಂದು ಮಗು ಮೃತಪಟ್ಟಿತ್ತು. 40 ವರ್ಷದ ಕನ್ನಡದ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ಅವರು ಮದುವೆಯಾಗದೆ ಸಿಂಗಲ್ ಮದರ್ ಅನಿಸಿಕೊಳ್ಳುತ್ತಿದ್ದಾರೆ.

ನೋಡಿರಿ

