‘ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ’ – ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ..!

‘ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ’ – ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ..!

ವಿಧಾನಸಭಾ ಚುನಾವಣೆಗೆ ಎರಡೇ ತಿಂಗಳು ಬಾಕಿ ಉಳಿದಿದ್ದು, ಜನಮನ ಗೆಲ್ಲಲು ಪಕ್ಷಗಳು ಪ್ರಚಾರದ ಭರಾಟೆಯಲ್ಲಿ ತೊಡಗಿವೆ. ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿಯೂ ತಂತ್ರಗಾರಿಕೆ ಶುರುವಾಗಿದೆ. ಆದ್ರೆ ಹಾಸನದಲ್ಲಿ ನಡೆದಿರೋ ಘಟನೆ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಹಾಸನ ಹೇಳಿ ಕೇಳಿ ಜೆಡಿಎಸ್ ಭದ್ರಕೋಟೆ. ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ತವರು ಜಿಲ್ಲೆ. ಆದ್ರೀಗ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ತಾವೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್.​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷದಲ್ಲಿಯೇ ಹತ್ತಾರು ಲೆಕ್ಕಾಚಾರಗಳು ಶುರುವಾಗಿದೆ.

ಇದನ್ನೂ ಓದಿ : ಫಾರ್ಮ್ ಹೌಸ್​ನಲ್ಲಿ ವಿದೇಶಿ ಹಕ್ಕಿಗಳು – ನಟ ದರ್ಶನ್ ವಿರುದ್ಧ ಕೇಸ್ ದಾಖಲು..!

2023ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, ರಾಜ್ಯದಲ್ಲಿ ಹಾಸನ ಕ್ಷೇತ್ರ ಕೂಡ ಮಹತ್ವ ಪಡೆದುಕೊಂಡಿದೆ. ಹಾಸನ ಕ್ಷೇತ್ರದಲ್ಲಿ ಈ ಬಾರಿ ಯಾರು ಜೆಡಿಎಸ್​ ಅಭ್ಯರ್ಥಿಯಾಗುತ್ತಾರೆ ಎಂಬ ಕುತೂಹಲ ಕ್ಷೇತ್ರದ ಜನರನ್ನು ಕಾಡುತ್ತಿದೆ. ಈ ನಡುವೆ ತಾವೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್.​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಜೊತೆಗೆ  ಶೀಘ್ರದಲ್ಲೇ ಪಟ್ಟಿಯಲ್ಲಿ ಹೆಸರು ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಹಾಸನದಿಂದ ರೇವಣ್ಣ ಸ್ಪರ್ಧೆ ಮಾಡುತ್ತಾರಾ? ಭವಾನಿ ರೇವಣ್ಣ ಅವರು ಅಭ್ಯರ್ಥಿ ಆಗುತ್ತಾರಾ ಎಂಬ ಚರ್ಚೆ ಹಲವು ದಿನಗಳಿಂದ  ನಡೆಯುತ್ತಲೇ ಇದೆ.

ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಕಕ್ಕೇನಹಳ್ಳಿಯಲ್ಲಿ ಅಣ್ಣಪ್ಪಸ್ವಾಮಿ ದೇವಾಲಯ ಉದ್ಘಾಟನೆ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಭಾಗಿಯಾಗಿದ್ದ ಭವಾನಿ ರೇವಣ್ಣ ಅವರು, ಹೆಚ್.ಡಿ ರೇವಣ್ಣ ಅವರು ಇಂಧನ ಮಂತ್ರಿಯಾಗಿದ್ದಾಗ ಅನುಕೂಲ ಮಾಡಿಕೊಟ್ಟಿದ್ದಾರೆ ಅಂತ ಈಗ ಗೊತ್ತಾಯ್ತು. ಅವರು ಮಂತ್ರಿಯಾಗಿದ್ದಾಗ ಇಡೀ ಜಿಲ್ಲೆಯ ಕೆಲಸಗಳನ್ನು ಮಾಡಿ ಕೊಟ್ಟಿದ್ದಾರೆ. ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಕ್ಷೇತ್ರವಾಗಿದ್ದು ಕೆಲವು ಕೆಲಸ, ಕಾರ್ಯಗಳು ಉಳಿದುಕೊಂಡಿವೆ. ಚುನಾವಣೆ ಇನ್ನೇನು ಹತ್ತಿರ ಬಂದಿದೆ. ಈ ಸಂದರ್ಭದಲ್ಲಿ ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕೆಂದು ಎಲ್ಲರೂ ಕೂಡ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಹಾಗಾಗಿ ಕೆಲವೇ ದಿನಗಳಲ್ಲಿ ನಮ್ಮ ಹೆಸರು ಕೂಡ ಹೇಳುತ್ತಾರೆ. ಮುಂದಿನ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟ ಆಗಲಿದೆ ಎಂದು ಹೇಳಿದ್ದಾರೆ.

ಕಳೆದೊಂದು ವರ್ಷದಿಂದ ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಅಲ್ಲದೇ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಕೂಡ ನಿರಂತರವಾಗಿ ಸಕ್ರಿಯರಾಗಿದ್ದರು. ಈಗಾಗಲೇ ಜೆಡಿಎಸ್​ 2023ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ 8 ಕ್ಷೇತ್ರ ಗಳಿಗೆ ಮಾತ್ರ ಅಭ್ಯರ್ಥಿಗಳ ಪ್ರಕಟ ಮಾಡಲಾಗಿತ್ತು. ಮೊದಲ ಪಟ್ಟಿಯಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು ತಮ್ಮ ಮಗನಿಗೆ ಟಿಕೆಟ್​ ಕೊಡಿಸುವಲ್ಲಿ ಸಕ್ಸಸ್ ಆಗಿದ್ದರು.

suddiyaana