ಎರಡನೇ ಬಾರಿ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ

ಎರಡನೇ ಬಾರಿ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ

ಗಾಂಧಿನಗರ: ಗುಜರಾತ್​ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣಚವನ ಸ್ವೀಕರಿಸಿದ್ದಾರೆ. 2ನೇ ಬಾರಿಗೆ ಗುಜರಾತ್​ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ.

ಡಿ. 12 ಸೋಮವಾರ, ಮಧ್ಯಾಹ್ನ 2 ಗಂಟೆಗೆ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್  ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇದನ್ನೂ ಓದಿ: ರಾಜಕೀಯ ಪಕ್ಷಗಳ ದಲಿತ ಪ್ರೀತಿ – ಕಾವೇರಿದ ಕಾಂಗ್ರೆಸ್ & ಬಿಜೆಪಿ ಟ್ವೀಟ್ ವಾರ್

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ, ಭೂಪೇಂದ್ರ ಪಟೇಲ್ ಹಾಗೂ16 ಮಂದಿ ಸಚಿವರಾಗಿಯೂ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ವೇಳೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

suddiyaana