ರೇಷನ್ ಕಾರ್ಡ್ BIG UPDATE! – ಕ್ಯೂನಲ್ಲಿ ನಿಲ್ಲಬೇಕಿಲ್ಲ!, ಮೊಬೈಲ್ನಲ್ಲೇ ಮಾಡಿ E-KYC

ರಾಜ್ಯದ ಎಲ್ಲಾ 2.67 ಕೋಟಿ ಪಡಿತರ ಫಲಾನುಭವಿಗಳಿಗೆ ಇ-ಕೆವೈಸಿ (E-KYC) ಕಡ್ಡಾಯವಾಗಿದ್ದು, ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ. ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನವಾಗಿದೆ. ಹೀಗಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ.
ದಿನವಿಡೀ ಕಾದು ಕುಳಿತರೂ ಇ-ಕೆವೈಸಿ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಹಲವರ ಅಳಲು. ಒಂದೇ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವುದರಿಂದ ಕೆಲವೆಡೆ ಸರ್ವರ್ ಡೌನ್ ಹಾಗೂ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಇದರಿಂದ ಜನರು ಪರದಾಡುವಂತಾಗಿದೆ.
ಇದನ್ನೂ ಓದಿ: ಸಕ್ಕರೆ ಪ್ರಿಯರಿಗೆ ಸಿಹಿ ಸುದ್ದಿ – ಸತತ ನಾಲ್ಕನೇ ದಿನವೂ ಇಳಿದ ಸಕ್ಕರೆ ಬೆಲೆ
ಕೇಂದ್ರ ಸರ್ಕಾರದ ನಿಯಮದಂತೆ, ಪಡಿತರ ಚೀಟಿದಾರರು ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ರಾಜ್ಯದ ಒಟ್ಟು 2,67,64,276 ಫಲಾನುಭವಿಗಳ ಮಾಹಿತಿಯನ್ನು ಎನ್ಐಸಿಯಿಂದ ಪಡೆದು, ಮರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜಿಲ್ಲೆಗಳ ಜಂಟಿ ಹಾಗೂ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.
ಮನೆಯಲ್ಲೇ ಕುಳಿತು E-KYC
ನ್ಯಾಯಬೆಲೆ ಅಂಗಡಿಗಳ ಮುಂದೆ ಜನದಟ್ಟಣೆ ಕಡಿಮೆ ಮಾಡಲು ಸರ್ಕಾರ ಇದೀಗ ಹೊಸ ವ್ಯವಸ್ಥೆ ರೂಪಿಸುತ್ತಿದೆ. ಮೊಬೈಲ್ನಲ್ಲೇ Face Authentication ಮೂಲಕ ಇ-ಕೆವೈಸಿ ಪೂರ್ಣಗೊಳಿಸುವ ಸೌಲಭ್ಯ ಕಲ್ಪಿಸಲು ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಲಾಗುತ್ತಿದೆ.
Directorate of Electronic Delivery of Citizen Services ಸಹಯೋಗದೊಂದಿಗೆ ಈ ಅಪ್ಲಿಕೇಷನ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಾರ್ವಜನಿಕರ ಬಳಕೆಗೆ ಬಿಡುಗಡೆ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಈ ಸೌಲಭ್ಯ ಜಾರಿಗೆ ಬಂದ ಬಳಿಕ APL ಮತ್ತು BPL ಪಡಿತರ ಚೀಟಿದಾರರು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕವೇ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.

ನೋಡಿರಿ

