ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌! – ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ಹೈಕೋರ್ಟ್‌

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌! – ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ  ಹೈಕೋರ್ಟ್‌ನಿಂದ ಬಿಗ್‌ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಡಿಕೆ ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್‌, ಮೇಲ್ಮನವಿ ವಾಪಸ್‌ ಗೆ ಅನುಮತಿ ನೀಡುವ ಮೂಲಕ ಡಿಕೆಶಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಹಸುಗೂಸು ಮಾರಾಟ ದಂಧೆ‌ ಪ್ರಕರಣ – ಮಹಿಳಾ ಏಜೆಂಟ್‌ ಹಾಗೂ ನಕಲಿ ವೈದ್ಯ ಅರೆಸ್ಟ್!

ಪ್ರಕರಣದ ಅರ್ಹತೆ ಬಗ್ಗೆ ಯಾವುದೇ ತೀರ್ಮಾನ ನೀಡುತ್ತಿಲ್ಲ. ಕ್ಯಾಬಿನೆಟ್ ನಿರ್ಧಾರವನ್ನು ಪ್ರಶ್ನಿಸಿ ಯಾರೂ ಬೇಕಾದರೂ ಪ್ರಶ್ನೆ ಮಾಡಬಹುದು. ಸಿಬಿಐ ಆದ್ರೂ ಚಾಲೆಂಜ್ ಮಾಡಬಹುದು ಅಥವಾ ಸಾರ್ವಜನಿಕರು ಬೇಕಾದ್ರೂ ರಿಟ್ ಅರ್ಜಿ ಸಲ್ಲಿಕೆ ಮಾಡಬಹುದು. ಆಗ ಹೈಕೋರ್ಟ್ ಅರ್ಜಿಯನ್ನು ಪರಿಗಣಿಸಿ ಮುಂದುವರೆಯಬೇಕಾ ಬೇಡವಾ ಅಂತ ನಿರ್ಧಾರ ಮಾಡುತ್ತೆ ಎಂದು ನ್ಯಾಯಾಲಯ ಹೇಳಿದೆ.

ಮೇಲ್ಮನವಿ ಹಿಂಪಡೆದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿದೆ. ಕಾಜಿ ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ಮಂಡಿಸಿದ್ದ ವಾದವನ್ನು ಹೈಕೋರ್ಟ್ ವಿಭಾಗೀಯ ಪೀಠ ಈ ವೇಳೆ ಪರಿಗಣಿಸಲಿಲ್ಲ.

Shwetha M