ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಬಿಗ್ ರಿಲೀಫ್ -48 ಗಂಟೆಗಳೊಳಗೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆದೇಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ, ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರನ್ನು 48 ಗಂಟೆಗಳೊಳಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ನ್ಯಾಯಾಲಯ ಆದೇಶಿಸಿದೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷ ಮತ್ತು ಕುಟುಂಬದವರು ಹಲವು ದಿನಗಳಿಂದ ಈ ಬೇಡಿಕೆ ಇಟ್ಟಿದ್ದರು. ಅಡಿಯಾಲಾ ಜೈಲಿನಲ್ಲಿ ಇಮ್ರಾನ್ ಖಾನ್ ಅವರ ಇತ್ತೀಚಿನ ವೈದ್ಯಕೀಯ ವರದಿಗಳನ್ನು ಉಲ್ಲೇಖಿಸಿ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಪಿಲ್ಲರ್ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾ*ವು!- ಇಂಜಿನಿಯರ್‌ಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಪಿಟಿಐ ವಕ್ತಾರ ನಯೀಂ ಹೈದರ್ ಪಂಜುಥಾ ಅವರ ಪ್ರಕಾರ, ಉನ್ನತ ನ್ಯಾಯಾಲಯ ಇಮ್ರಾನ್ ಖಾನ್ ಅವರನ್ನು ಶಿಫಾ ಇಂಟರ್‌ನ್ಯಾಷನಲ್ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 16ರವರೆಗೆ ಇರಿಸಲು ಸೂಚಿಸಿದೆ. ಜೊತೆಗೆ, ಪ್ರತಿ ವಾರ ಅವರ ಕುಟುಂಬ ಸದಸ್ಯರು ಭೇಟಿ ಮಾಡಲು ಅವಕಾಶ ಕಲ್ಪಿಸುವಂತೆ ಆದೇಶಿಸಿದೆ.
73 ವರ್ಷದ ಕ್ರಿಕೆಟಿಗ-ರಾಜಕಾರಣಿ ಇಮ್ರಾನ್ ಖಾನ್ ಅವರು ಆಗಸ್ಟ್ 2023ರಿಂದ ಅಡಿಯಾಲಾ ಜೈಲಿನಲ್ಲಿದ್ದಾರೆ. ಕಳೆದ ವರ್ಷದಿಂದ ಅವರ ಪುತ್ರರು ತಂದೆಯ ಆರೋಗ್ಯದ ಬಗ್ಗೆ ನಿರಂತರ ಕಳವಳ ವ್ಯಕ್ತಪಡಿಸುತ್ತಿದ್ದು, ಜೈಲಿನಲ್ಲಿದ್ದ ವೇಳೆ ಇಮ್ರಾನ್ ಖಾನ್ ಅವರ ಬಲ ಕಣ್ಣಿನ ದೃಷ್ಟಿ ಗಮನಾರ್ಹವಾಗಿ ಕುಂದಿದೆ ಎಂದು ವಕೀಲರು ತಿಳಿಸಿದ್ದಾರೆ.

ನೋಡಿರಿ

