ರಾಜ್ಯಸಭಾ ಚುನಾವಣೆ ಕ್ಲೈಮ್ಯಾಕ್ಸ್ನಲ್ಲಿ ಬಿಗ್ ಟ್ವಿಸ್ಟ್ – ಸೋಮಶೇಖರ್ ಮತ್ತು ಹೆಬ್ಬಾರ್ ಬಿಜೆಪಿಗೆ ಕೈ ಕೊಟ್ಟಿದ್ದೇಕೆ..?

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದ ರಾಜ್ಯಸಭಾ ಚುನಾವಣೆ ಕ್ಲೈಮ್ಯಾಕ್ಸ್ನಲ್ಲಿ ಬಿಗ್ ಟ್ವಿಸ್ಟ್ ಪಡೆದಿದೆ. ಬಿಜೆಪಿಗೆ ಸ್ವಪಕ್ಷನಾಯಕರೇ ಮರ್ಮಾಘಾತ ನೀಡಿದ್ರೆ, ಜೆಡಿಎಸ್ ಅಭ್ಯರ್ಥಿ ಸೋತು ಸುಣ್ಣವಾಗಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಗೆ ಒಳೇಟು ನೀಡಲು ಮುಂದಾಗಿದ್ದ ದೋಸ್ತಿಗಳಿಗೆ ತಮ್ಮ ತಂತ್ರವೇ ತಿರುಗುಬಾಣವಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ. ಮತ್ತೊಂದೆಡೆ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಮತದಾನವನ್ನೇ ಮಾಡದೇ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಅಷ್ಟಕ್ಕೂ ದೋಸ್ತಿ ಪ್ಲ್ಯಾನ್ ಫೇಲ್ ಆಗಿದ್ದೇಗೆ..? ಸೋಮಶೇಖರ್ ಮತ್ತು ಹೆಬ್ಬಾರ್ ಬಿಜೆಪಿಗೆ ಕೈ ಕೊಟ್ಟಿದ್ದೇಕೆ..? ವಿಪ್ ಜಾರಿಯಾಗಿದ್ರೂ ಕೇರ್ ಮಾಡದ ನಾಯಕರಿಗೆ ಕಾದಿದ್ಯಾ ಕಾನೂನು ಸಂಕಷ್ಟ..? ಕಾಂಗ್ರೆಸ್ ಗೆ ಯಾರೆಲ್ಲಾ ಮತದಾನ ಮಾಡಿದ್ರು..? ರಾಜ್ಯಸಭಾ ಚುನಾವಣೆಯ ರೋಚಕ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ – ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಮತದಾನ ನಡೆದಿದೆ. ಬೆಳಗ್ಗೆ 9 ಗಂಟೆಯಿಂದಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದ್ರು. ಕಾಂಗ್ರೆಸ್ನಿಂದ ಮೂವರು, ಬಿಜೆಪಿಯಿಂದ ಒಬ್ಬರು ಹಾಗೂ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅಖಾಡದಲ್ಲಿದ್ದರು. ಬಿಜೆಪಿ ನಾಯಕರು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸೂಚನೆ ನೀಡಿದ್ದರು. ಆದ್ರೆ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಮತ್ತೊಬ್ಬ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಈ ಮೂಲಕ ನಿರೀಕ್ಷೆಯಂತೆ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದೆ.
ಯಾರಿಗೆ ಎಷ್ಟು ಮತ?
- ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಅಜಯ್ ಮಕನ್ ಗೆ 47
- ಸೈಯದ್ ನಾಸೆರ್ ಹುಸೇನ್ ಗೆ 47 ಹಾಗೂ ಜಿ.ಸಿ ಚಂದ್ರಶೇಖರ್ ಗೆ 45 ಮತಗಳು
- ಇನ್ನು ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆಗೆ 48 ಮತಗಳ ಚಲಾವಣೆ
- ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ 35 ಮತಗಳು ಸಿಕ್ಕಿದ್ದು ಚುನಾವಣೆಯಲ್ಲಿ ಸೋಲು
- ಕಾಂಗ್ರೆಸ್ ಪಕ್ಷದ 134 ಸದಸ್ಯರು, ನಾಲ್ವರು ಪಕ್ಷೇತರ ಶಾಸಕರು ಕಾಂಗ್ರೆಸ್ ಗೆ ಮತ
- ಪಕ್ಷೇತರರಾದ ಲತಾ ಮಲ್ಲಿಕಾರ್ಜುನ, ಕೆ.ಹೆಚ್. ಪುಟ್ಟಸ್ವಾಮಿ ಗೌಡ
- ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ
- ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ ಕೂಡ ಕಾಂಗ್ರೆಸ್ ಗೆ ಮತ
- ಬಿಜೆಪಿ ಅಸಮಾಧಾನಿತ ಶಾಸಕ ಸೋಮಶೇಖರ್ ಕಾಂಗ್ರೆಸ್ ಪರ ಅಡ್ಡ ಮತದಾನ
- ಕಾಂಗ್ರೆಸ್ ನ 134, ಪಕ್ಷೇತರ 4, ಎಸ್ಟಿಎಸ್ ಸೇರಿ 139 ಮತಗಳು ಕಾಂಗ್ರೆಸ್ ಪರ
ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಅಜಯ್ ಮಕನ್ ಗೆ 47, ಸೈಯದ್ ನಾಸೆರ್ ಹುಸೇನ್ ಗೆ 47 ಹಾಗೂ ಜಿ.ಸಿ ಚಂದ್ರಶೇಖರ್ ಗೆ 45 ಮತಗಳು ಬಿದ್ದಿವೆ. ಇನ್ನು ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆಗೆ 48 ಮತಗಳು ಬಿದ್ದಿದ್ದು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ 35 ಮತಗಳು ಸಿಕ್ಕಿವೆ. ಕಾಂಗ್ರೆಸ್ ಪಕ್ಷದ 134 ಸದಸ್ಯರು ಹಾಗೂ ನಾಲ್ವರು ಪಕ್ಷೇತರ ಶಾಸಕರು ಕೂಡಾ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ. ಪಕ್ಷೇತರರಾದ ಲತಾ ಮಲ್ಲಿಕಾರ್ಜುನ, ಕೆ.ಹೆಚ್. ಪುಟ್ಟಸ್ವಾಮಿ ಗೌಡ, ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ. ಇನ್ನು ಬಿಜೆಪಿ ಅಸಮಾಧಾನಿತ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿದ್ದಾರೆ. ಈ ಮೂಲಕ ಒಟ್ಟಾರೆ 139 ಮತಗಳು ಕಾಂಗ್ರೆಸ್ ಪಾಲಾಗಿವೆ.
ರಾಜ್ಯಸಭೆ ಚುನಾವಣೆ ಮತದಾನಕ್ಕೂ ಮುನ್ನವೇ ಶಾಸಕ ಎಸ್.ಟಿ ಸೋಮಶೇಖರ್ ಅಭಿವೃದ್ಧಿಗೆ ನನ್ನ ಮತ ಎಂದಿದ್ದರು. ಆತ್ಮಸಾಕ್ಷಿಯಾಗಿ ನಾನು ಮತದಾನ ಮಾಡುತ್ತೇನೆ ಎನ್ನುವ ಮೂಲಕ ಅಡ್ಡಮತದಾನದ ಸುಳಿವು ನೀಡಿದ್ದರು. ಅದ್ರಂತೆ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ್ದಾರೆ. ಎಸ್.ಟಿ ಸೋಮಶೇಖರ್ ನಡೆಗೆ ದೋಸ್ತಿ ಪಕ್ಷಗಳಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಯಶವಂತಪುರ ಬಿಜೆಪಿ ಮಂಡಲ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿದೆ. ಜೆಡಿಎಸ್ ಕಾರ್ಯಕರ್ತರು ಬುಧವಾರ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.
ಪುತ್ರರ ಭವಿಷ್ಯಕ್ಕಾಗಿ ರಾಜೀನಾಮೆ?
- ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರಾಜೀನಾಮೆ ಸಾಧ್ಯತೆ
- ಕಾಂಗ್ರೆಸ್ ಸೇರ್ಪಡೆ ಬಳಿಕ ಇಬ್ಬರೂ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ
- ಬೆಂಗಳೂರು ಉತ್ತರದಿಂದ ಎಸ್ಟಿ ಸೋಮಶೇಖರ್, ಉತ್ತರ ಕನ್ನಡ ಕ್ಷೇತ್ರ
- ಉತ್ತರ ಕನ್ನಡ ಕ್ಷೇತ್ರದಿಂದ ಶಿವರಾಂ ಹೆಬ್ಬಾರ್, ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕೆ?
- ಎಸ್.ಟಿ ಸೋಮಶೇಖರ್ ಅವರ ರಾಜೀನಾಮೆಯಿಂದ ತೆರವಾಗುವ ಯಶವಂತಪುರ
- ವಿಧಾನಸಭಾ ಕ್ಷೇತ್ರಕ್ಕೆ ಅವರ ಪುತ್ರ ನಿಶಾಂತ್ ಅವರಿಗೆ ಪಕ್ಷದಿಂದ ಟಿಕೆಟ್ ?
- ಹೆಬ್ಬಾರ್ ಅವರು ಕೂಡ ತಮ್ಮ ರಾಜೀನಾಮೆಯಿಂದ ತೆರವಾಗುವ ಯಲ್ಲಾಪುರ
- ಪುತ್ರ ವಿವೇಕ್ ಹೆಬ್ಬಾರ್ ಅವರಿಗೆ ಬಿಟ್ಟುಕೊಡುವ ಮೂಲಕ ಕಾಂಗ್ರೆಸ್ ಟಿಕೆಟ್
- ಪಕ್ಷದ ಶಿಸ್ತುಕ್ರಮ ಕೈಗೊಳ್ಳುವ ಮುನ್ನವೇ ರಾಜೀನಾಮೆ ನೀಡಲು ತೀರ್ಮಾನ
ಬಿಜೆಪಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸೇರ್ಪಡೆ ಬಳಿಕ ಇಬ್ಬರೂ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಬೆಂಗಳೂರು ಉತ್ತರದಿಂದ ಎಸ್ಟಿ ಸೋಮಶೇಖರ್, ಉತ್ತರ ಕನ್ನಡ ಕ್ಷೇತ್ರದಿಂದ ಶಿವರಾಂ ಹೆಬ್ಬಾರ್, ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಎಸ್.ಟಿ ಸೋಮಶೇಖರ್ ಅವರ ರಾಜೀನಾಮೆಯಿಂದ ತೆರವಾಗುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಅವರ ಪುತ್ರ ನಿಶಾಂತ್ ಅವರಿಗೆ ಪಕ್ಷದಿಂದ ಟಿಕೆಟ್ ಪಡೆದುಕೊಂಡು ರಾಜಕೀಯ ಭವಿಷ್ಯ ರೂಪಿಸುವ ಚಿಂತನೆ ನಡೆಸಿದ್ದಾರಂತೆ. ಇತ್ತ ಹೆಬ್ಬಾರ್ ಅವರು ಕೂಡ ತಮ್ಮ ರಾಜೀನಾಮೆಯಿಂದ ತೆರವಾಗುವ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಪುತ್ರ ವಿವೇಕ್ ಹೆಬ್ಬಾರ್ ಅವರಿಗೆ ಬಿಟ್ಟುಕೊಡುವ ಮೂಲಕ ಕಾಂಗ್ರೆಸ್ ಟಿಕೆಟ್ ಪಡೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತುಕ್ರಮ ಕೈಗೊಳ್ಳುವ ಮುನ್ನವೇ ರಾಜೀನಾಮೆ ನೀಡಲು ಇಬ್ಬರು ಶಾಸಕರು ಮುಂದಾಗಿದ್ದಾರೆ ಎನ್ನಲಾಗಿದೆ.
ಸದ್ಯ ಅಡ್ಡ ಮತದಾನ ಮಾಡಿದ್ದಾರೆ ಎನ್ನಲಾದ ಎಸ್.ಟಿ ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾರ್ ಸಮಾಲೋಚನೆ ನಡೆಸಿದ್ದಾರೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವ್ರ ಭೇಟಿಗೆ ಸಮಯ ಕೇಳಿದ್ದು, ದೂರು ನೀಡಲು ನಿರ್ಧರಿಸಿದ್ದಾರೆ.