ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಂಜಿತ್ ವಿರುದ್ಧ ಕೇಸ್! – ಕೋರ್ಟ್ ಮೆಟ್ಟಿಲೇರಿದ ಮನೆ ಜಗಳ!

ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲಾಗಿದೆ. ಅಕ್ಕ ಭಾವನ ಜೊತೆ ಜಗಳ ಮಾಡಿ, ಹಲ್ಲೆ ನಡೆಸಿದ್ದಾರೆ ಎಂದು ರಂಜಿತ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ:ಸೆ.21ಕ್ಕೆ ಭಾರತ Vs ಪಾಕ್ ಫೈಟ್ – ಸೂಪರ್ 4ಗೆ ಅರ್ಹತೆ ಪಡೆದ ಪಾಕಿಸ್ತಾನ
ಅಕ್ಕ, ಬಾವನ ಮೇಲೆ ರಂಜಿತ್ ಹಲ್ಲೆ ನಡೆಸಿದ್ದು ಯಾಕೆ?
ಬಿಗ್ ಬಾಸ್ ಖ್ಯಾತಿಯ ರಂಜಿತ್ ಅಕ್ಕ ಬಾವ ಕಳೆದ 6 ವರ್ಷಗಳಿಂದ ಅಮೃತಹಳ್ಳಿಯ ಫ್ಲ್ಯಾಟ್‌ನಲ್ಲಿ ವಾಸವಾಗಿದೆ. ರಂಜಿತ್ 2025 ರಿಂದ ಅಕ್ಕ ಬಾವನ ಜೊತೆ ಇದೇ ಫ್ಲ್ಯಾಟ್ ನಲ್ಲಿ ವಾಸವಿದ್ದರು. ಆದ್ರೀಗ ಮನೆ ವಿಚಾರಕ್ಕೆ ಅಕ್ಕ ತಮ್ಮನ ನಡುವೆ ಜಗಳ ಶುರುವಾಗಿದೆ. ಈ ಮನೆ ನನ್ನದು ಎಂದು ಅಕ್ಕ ತಮ್ಮನ ನಡುವೆ ಗಲಾಟೆ ನಡೆದಿದೆ. ರಂಜಿತ್ , ರಂಜಿತ್ ಪತ್ನಿ ಜೊತೆ ರಂಜಿತ್ ಅಕ್ಕ ಗಲಾಟೆ ಮಾಡಿ ಒಬ್ಬರಿಗೊಬ್ಬರು ಹಲ್ಲೆ ನಡೆಸಿದ್ದಾರೆ. ಬಳಿಕ ರಂಜಿತ್ ಮನೆ ಬಿಟ್ಟು ಹೋಗದೇ ಈ ಮನೆ ನನ್ನದು ಎಂದು ರಂಜಿತ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಜಗದೀಶ್ ದೂರು ನೀಡಿದ್ದಾರೆ.
ರಂಜಿತ್ ಬಾವ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಎನ್‌ಸಿಆರ್ (NCR) ದಾಖಲಿಸಿದ್ದಾರೆ. ದೂರಿಗೆ ಸಾಕ್ಷ್ಯವಾಗಿ ಮನೆಯಲ್ಲಿ ಒಬ್ಬರಿಗೊಬ್ಬರು ಬೈದಾಡಿಕೊಳ್ಳುವ ವೀಡಿಯೋವನ್ನು ನೀಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ರಂಜಿತ್ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ಮತ್ತೊಮ್ಮೆ ಗಲಾಟೆ ಮಾಡಿಕೊಳ್ಳಬಾರದು ಎಂದು ಹೇಳಿ ನ್ಯಾಯಾಲಯದಲ್ಲಿ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿ ಕಳುಹಿಸಿದ್ದಾರೆ.

ನೋಡಿರಿ

